ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ವೆಂಟಿ–20 ಏಷ್ಯಾ ಕಪ್‌: ಸದ್ಯಕ್ಕಿಲ್ಲ ನಿರ್ಧಾರ

ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಸಭೆ: ಗಂಗೂಲಿ, ಜಯ್‌ ಶಾ ಭಾಗಿ
Last Updated 9 ಜೂನ್ 2020, 10:18 IST
ಅಕ್ಷರ ಗಾತ್ರ

ನವದೆಹಲಿ: ಈ ವರ್ಷದ ಏಷ್ಯಾ ಕಪ್‌ ಟ್ವೆಂಟಿ–20 ಕ್ರಿಕೆಟ್‌ ಟೂರ್ನಿಯ ನಡೆಸುವ ಕುರಿತು ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳದಿರಲು ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ (ಎಸಿಸಿ) ತೀರ್ಮಾನಿಸಿದೆ. ಕೋವಿಡ್‌–19 ಪಿಡುಗಿನ ಹಿನ್ನೆಲೆಯಲ್ಲಿ ಟೂರ್ನಿಯನ್ನು ಮುಂದೂಡಲಾಗುತ್ತದೆ ಎಂಬ ಊಹಾಪೋಹಗಳೂ ಇವೆ.

ಈ ಬಾರಿಯ ಏಷ್ಯಾ ಕಪ್‌ ಟೂರ್ನಿಗೆ ಪಾಕಿಸ್ತಾನ ಆತಿಥ್ಯ ವಹಿಸಲಿದೆ. ಒಂದು ವೇಳೆ ಟೂರ್ನಿ ನಡೆದರೆ ಅದು ಬೇರೆ ದೇಶಕ್ಕೆ ಸ್ಥಳಾಂತರಗೊಳ್ಳಲಿದೆ. ಏಕೆಂದರೆ ಭಾರತ ತಂಡ, ಪಾಕಿಸ್ತಾನ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿಲ್ಗ.

ಅಕ್ಟೋಬರ್‌ ಹಾಗೂ ನವೆಂಬರ್‌ನಲ್ಲಿಆಸ್ಟ್ರೇಲಿಯಾದಲ್ಲಿ ನಿಗದಿಯಾಗಿರುವ ಟಿ20 ವಿಶ್ವಕಪ್‌ ಆಯೋಜನೆ ಕುರಿತು ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ನ (ಐಸಿಸಿ) ನಿರ್ಧಾರವನ್ನು ಎಸಿಸಿ ನಿರೀಕ್ಷಿಸುತ್ತಿದೆ. ಈ ನಿರ್ಧಾರದ ಬಳಿಕ ಏಷ್ಯಾ ಕಪ್‌ ಕುರಿತು ಎಸಿಸಿ ಯೋಚಿಸಲಿದೆ.

‘ಏಷ್ಯಾ ಕಪ್‌ ಟಿ20 ಟೂರ್ನಿಯನ್ನು ಆಯೋಜಿಸಲು ಮಂಡಳಿ ಒತ್ತು ನೀಡಲಿದೆ. ಕೋವಿಡ್‌ ಪಿಡುಗಿನ ಹಿನ್ನೆಲೆಯಲ್ಲಿ, ಟೂರ್ನಿ ನಡೆಯುವ ಸ್ಥಳಗಳ ಆಯ್ಕೆ ಬಗ್ಗೆ ಚರ್ಚೆ ನಡೆಯಿತು. ಸೂಕ್ತ ಸಮಯದಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಸೋಮವಾರ ನಡೆದ ಸಭೆಯ ನಂತರ ಎಸಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಸಭೆಯ ಅಧ್ಯಕ್ಷತೆಯನ್ನು ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿಯ ಅಧ್ಯಕ್ಷ ನಜ್ಮುಲ್‌ ಹಸನ್‌ ಪ್ಯಾಪೊನ್‌ ವಹಿಸಿದ್ದರು. ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ (ಮಂಡಳಿಯ ಸದಸ್ಯರಾಗಿ) ಹಾಗೂ ಕಾರ್ಯದರ್ಶಿ ಜಯ್‌ ಶಾ (ಪದನಿಮಿತ್ತ) ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT