ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಬೈನಲ್ಲಿ ಏಷ್ಯಾ ಕಪ್: ಭಾರತ, ಪಾಕ್ ಆಟ

Last Updated 28 ಫೆಬ್ರುವರಿ 2020, 19:49 IST
ಅಕ್ಷರ ಗಾತ್ರ

ಕೋಲ್ಕತ್ತ: ಮುಂದಿನ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯು ದುಬೈನಲ್ಲಿ ನಡೆಯಲಿದೆ. ಅದರಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಆಡಲಿವೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದರು.

ಶುಕ್ರವಾರ ಈಡನ್ ಗಾರ್ಡನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಾಕಿಸ್ತಾನದಲ್ಲಿ ಟೂರ್ನಿ ಆಯೋಜನೆಗೊಂಡರೆ ಭಾರತ ತಂಡವು ಅಲ್ಲಿ ಹೋಗಿ ಆಡಲು ಸಾಧ್ಯವಿಲ್ಲ. ಆದ್ದರಿಂದ ಟೂರ್ನಿಯು ತಟಸ್ಥ ತಾಣ ವಾದ ದುಬೈನಲ್ಲಿ ನಡೆಯಲಿದೆ’ ಎಂದರು.

ಭಾರತ ಮತ್ತು ಪಾಕಿಸ್ತಾನ ನಡುವಣ 2012–13ರಿಂದ ಇಲ್ಲಿಯವರೆಗೆ ದ್ವಿಪಕ್ಷೀಯ ಸರಣಿಗಳು ನಡೆದಿಲ್ಲ. ರಾಜ ತಾಂತ್ರಿಕ ಕಾರಣಗಳಿಂದ ಉಭಯ ದೇಶಗಳ ಕ್ರಿಕೆಟ್ ಸಂಬಂಧವೂ ಚೆನ್ನಾಗಿಲ್ಲ. ಆದರೆ ಐಸಿಸಿಯ ಟೂರ್ನಿಗಳಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿವೆ.

ಮಾರ್ಚ್‌ 3ರಿಂದ ದುಬೈನಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಸಭೆಯು ನಡೆ ಯಲಿದೆ. ಗಂಗೂಲಿ ಅದರಲ್ಲಿ ಭಾಗ ವಹಿಸಲು ತೆರಳಲಿದ್ದಾರೆ.

ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿ ರುವ ಭಾರತ ಮಹಿಳಾ ತಂಡವನ್ನು ಅವರು ಅಭಿನಂದಿಸಿದರು.

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಸೋತಿರುವ ವಿರಾಟ್ ಕೊಹ್ಲಿ ಬಳಗವು ಎರಡನೇ ಪಂದ್ಯದಲ್ಲಿ ತಿರುಗೇಟು ನೀಡಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ಶನಿವಾರದಿಂದ ಈಡನ್‌ ಗಾರ್ಡನ್‌ ನಲ್ಲಿ ಆರಂಭವಾಗಲಿರುವ ರಣಜಿ ಟ್ರೋಫಿ ಸೆಮಿಫೈನಲ್‌ ಕುರಿತು ಗಂಗೂಲಿ, ‘ನವಪೀಳಿಗೆಯ ಆಟಗಾರರಿರುವ ಎರಡು ತಂಡಗಳು ಕಣದಲ್ಲಿವೆ. ಯಾರು ಚೆನ್ನಾಗಿ ಆಡುತ್ತಾರೋ ಅವರು ಗೆಲ್ಲುತ್ತಾರೆ. ಈಗಲೇ ಅದರ ಬಗ್ಗೆ ಮಾತನಾಡುವುದು ಬೇಡ. ಐದು ದಿನ ಗಳ ನಂತರ ಚರ್ಚಿಸೋಣ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT