ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Asian Games | IND vs AFG: ಮಳೆಯಿಂದಾಗಿ ಪಂದ್ಯ ರದ್ದು; ಭಾರತಕ್ಕೆ ಚಿನ್ನ

Published 7 ಅಕ್ಟೋಬರ್ 2023, 9:18 IST
Last Updated 7 ಅಕ್ಟೋಬರ್ 2023, 9:18 IST
ಅಕ್ಷರ ಗಾತ್ರ

ಹಾಂಗ್‌ಝೌ: ಭಾರತ ಮತ್ತು ಅಫ್ಗಾನಿಸ್ತಾನ ತಂಡಗಳ ನಡುವಣ ಏಷ್ಯನ್ ಕ್ರೀಡಾಕೂಟದ ಟಿ20 ಕ್ರಿಕೆಟ್ ಫೈನಲ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ.

ಆದರೆ ಅಫ್ಗಾನಿಸ್ತಾನಕ್ಕಿಂತಲೂ ಉತ್ತಮ ರ್‍ಯಾಂಕಿಂಗ್ ಹೊಂದಿರುವ ಹಿನ್ನೆಲೆಯಲ್ಲಿ ಭಾರತ ಚಿನ್ನದ ಪದಕವನ್ನು ಜಯಿಸಿದೆ.

ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್‌ನಲ್ಲಿ ಟಿ20 ಕ್ರಿಕೆಟ್ ಆಳವಡಿಸಲಾಗಿತ್ತು. ಇದರೊಂದಿಗೆ ಭಾರತದ ಪುರುಷ ಹಾಗೂ ಮಹಿಳಾ ತಂಡಗಳು ಚಿನ್ನದ ಪದಕಗಳನ್ನು ಗೆದ್ದಿವೆ.

ಮಳೆಯಿಂದಾಗಿ ಪಂದ್ಯ ರದ್ದು..

ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾದಾಗ ಅಫ್ಗಾನಿಸ್ತಾನ 18.2 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 112 ರನ್ ಗಳಿಸಿತ್ತು.

ಅಫ್ಗಾನಿಸ್ತಾನ 10.5 ಓವರ್‌ಗಳಲ್ಲಿ 52 ರನ್ನಿಗೆ ಐದು ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಭಾರತ ಪಂದ್ಯದಲ್ಲಿ ಹಿಡಿತ ಸಾಧಿಸಿತ್ತು.

ಆದರೆ ಮುರಿಯದ ಆರನೇ ವಿಕೆಟ್‌ಗೆ 60 ರನ್‌ಗಳ ಜೊತೆಯಾಟ ಕಟ್ಟಿದ ಶಾಹೀದುಲ್ಲಾ ಕಮಾಲ್ ಹಾಗೂ ಗುಲ್ಬದಿನ್ ನೈಬ್ ತಂಡಕ್ಕೆ ಆಸರೆಯಾದರು.

ಶಾಹೀದುಲ್ಲಾ 49* ಮತ್ತು ಗುಲ್ಬದಿನ್ 27* ರನ್ ಗಳಿಸಿದರು . ಭಾರತದ ಪರ ಅರ್ಶದೀಪ್ ಸಿಂಗ್, ಶಿವಂ ದುಂಬೆ, ಶಹಬಾಜ್ ಅಹ್ಮದ್ ಮತ್ತು ರವಿ ಬಿಷ್ಣೋಯಿ ತಲಾ ಒಂದು ವಿಕೆಟ್ ಗಳಿಸಿದರು.

ಕ್ವಾರ್ಟರ್‌ಫೈನಲ್‌ನಲ್ಲಿ ನೇಪಾಳ ವಿರುದ್ಧ 23 ರನ್ ಅಂತರದ ಗೆಲುವು ದಾಖಲಿಸಿದ್ದ ಋತುರಾಜ್ ಗಾಯಕವಾಡ್ ನೇತೃತ್ವದ ಭಾರತ ತಂಡವು ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶ ವಿರುದ್ಧ 9 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT