ಬುಧವಾರ, ಮಾರ್ಚ್ 29, 2023
32 °C

ನಟಿ ಆಥಿಯಾ ಶೆಟ್ಟಿಯೊಂದಿಗಿನ ಸಂಬಂಧವನ್ನು ಅಧಿಕೃತವಾಗಿ ಘೋಷಿಸಿದ ಕೆ.ಎಲ್.ರಾಹುಲ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಭಾರತ ಕ್ರಿಕೆಟ್ ತಂಡದ ಬಲಗೈ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಮತ್ತು ಬಾಲಿವುಡ್ ನಟಿ ಹಾಗೂ ಸುನಿಲ್ ಶೆಟ್ಟಿ ಅವರ ಪುತ್ರಿ ಆಥಿಯಾ ಶೆಟ್ಟಿ ನಡುವಣ ಡೇಟಿಂಗ್ ಗಾಸಿಪ್‌‌ಗೆ ಇದೀಗ ತೆರೆಬಿದ್ದಿದೆ. ಕೆ.ಎಲ್.ರಾಹುಲ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಚಿತ್ರವೊಂದನ್ನು ಹಂಚಿಕೊಂಡಿದ್ದು, ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ್ದಾರೆ.

ತಿಂಗಳುಗಳ ಊಹಾಪೋಹಗಳ ನಂತರ, ಆಥಿಯಾ ಅವರ ಜನ್ಮದಿನದಂದು ಕೆ.ಎಲ್.ರಾಹುಲ್ ನಟಿಯೊಂದಿಗಿನ ಫೋಟೊಗಳನ್ನು ರೊಮ್ಯಾಂಟಿಕ್ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

ಆಥಿಯಾ ಶೆಟ್ಟಿ ಜೊತೆಗಿನ ಎರಡು ಫೋಟೊಗಳನ್ನು ಹಂಚಿಕೊಂಡಿದ್ದು, 'ಹುಟ್ಟು ಹಬ್ಬದ ಶುಭಾಶಯಗಳು ನನ್ನ ಪ್ರೀತಿಯ ಆಥಿಯಾ ಶೆಟ್ಟಿ' ಎಂದು ಬರೆದಿದ್ದಾರೆ.

ದುಬೈ ಇಂಟರ್‌ ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ T20 ವಿಶ್ವಕಪ್ ಕ್ರಿಕೆಟ್‌ನ ಸ್ಕಾಟ್ಲೆಂಡ್ ವಿರುದ್ಧದ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಭಾರತ ತಂಡವು ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಬಳಿಕ ರಾಹುಲ್ ಈ ಪೋಸ್ಟ್ ಮಾಡಿದ್ದಾರೆ.

ಕುತೂಹಲಕಾರಿ ಸಂಗತಿಯೆಂದರೆ, ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದ ವೇಳೆ ರಾಹುಲ್ ಮತ್ತು ಟೀಂ ಇಂಡಿಯಾವನ್ನು ಹುರಿದುಂಬಿಸಲು ಆಥಿಯಾ ಕ್ರೀಡಾಂಗಣದಲ್ಲಿ ಹಾಜರಿದ್ದರು. ಪಂದ್ಯದಲ್ಲಿ ರಾಹುಲ್ ಅರ್ಧಶತಕ ಗಳಿಸುತ್ತಿದ್ದಂತೆ, ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ಅವರ ಜೊತೆಗೆ ಆಥಿಯಾ ಚಪ್ಪಾಳೆ ತಟ್ಟುತ್ತಿರುವುದು ಕಂಡುಬಂದಿತ್ತು.

ಈ ವರ್ಷದ ಆರಂಭದಲ್ಲಿ, ಇಂಗ್ಲೆಂಡ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಹೊರಡುವ ಮೊದಲು ಕೆ.ಎಲ್. ರಾಹುಲ್, ಆಥಿಯಾ ಅವರನ್ನು ತಮ್ಮ ಪಾರ್ಟ್ನರ್ ಎಂದು ನಮೂದಿಸಿದ್ದರು ಮತ್ತು ಅದನ್ನು ಬಿಸಿಸಿಐಗೆ ತಿಳಿಸಿದ್ದರು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು