ಬುಧವಾರ, ಮಾರ್ಚ್ 3, 2021
18 °C

ಕೆ.ಎಲ್. ರಾಹುಲ್ ಜೊತೆಗಿನ 'ಕಾಣದ' ಫೋಟೊ ಹಂಚಿದ ಅಥಿಯಾ ಶೆಟ್ಟಿ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕ್ರಿಕೆಟಿಗ ಕೆ.ಎಲ್. ರಾಹುಲ್ ಮತ್ತು ಬಾಲಿವುಡ್ ಸ್ಟಾರ್ ಸುನಿಲ್ ಶೆಟ್ಟಿ ಮಗಳು ಅಥಿಯಾ ಶೆಟ್ಟಿ ನಡುವಣ ಸ್ನೇಹದ ಕುರಿತು ಈಗಾಗಲೇ ಬಹಳಷ್ಟು ಸುದ್ದಿಯಾಗಿದೆ. ಇವರಿಬ್ಬರೂ ಪ್ರೇಮಿಸುತ್ತಿದ್ದಾರೆ ಎಂಬುದು ಸುದ್ದಿಯಾಗಿತ್ತು. ಈಗ ಕೆ.ಎಲ್. ರಾಹುಲ್ ಅವರೊಂದಿಗೆ ಇದುವರೆಗೆ 'ಕಾಣದ' ಚಿತ್ರವನ್ನು ಅಥಿಯಾ ಶೆಟ್ಟಿ ಹಂಚಿಕೊಂಡಿದ್ದಾರೆ.

ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಸವಾಲನ್ನು ಸ್ವೀಕರಿಸುತ್ತಾ, ರಾಹುಲ್ ಜೊತೆಗಿನ ಇದುವರೆಗೆ ಕಾಣದ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇವರಿಬ್ಬರು ಈ ಚಿತ್ರವನ್ನು ಯಾವಾಗ ತೆಗೆದಿರಬಹುದು ಎಂಬುದು ಅಭಿಮಾನಿಗಳಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿದ್ದ ಲಾಕ್‌ಡೌನ್ ಸಂದರ್ಭದಲ್ಲಿ ಕ್ಲಿಕ್ಕಿಸಿರಬಹುದೇ ಎಂದು ಅಭಿಮಾನಿಗಳು ಅನುಮಾನಿಸಿದ್ದಾರೆ. ಚಿತ್ರದಲ್ಲಿ ರಾಹುಲ್ ಹಾಗೂ ಅಥಿಯಾ ಮುಖಕ್ಕೆ ಮಾಸ್ಕ್ ಧರಿಸಿರುವುದು ಕಂಡುಬಂದಿದೆ.

ಇದನ್ನೂ ಓದಿ: 

2019ರಿಂದಲೇ ಕೆ.ಎಲ್. ರಾಹುಲ್ ಹಾಗೂ ಅಥಿಯಾ ಶೆಟ್ಟಿ ಡೇಟಿಂಗ್ ಮಾಡಿಕೊಳ್ಳುತ್ತಿದ್ದಾರೆ ಎಂಬುದು ವರದಿಯಾಗಿತ್ತು. ಇವರಿಬ್ಬರು ಈಗಾಗಲೇ ಪರಸ್ಪರ ಜೊತೆಗಿರುವ ಚಿತ್ರಗಳನ್ನು ಹಲವು ಬಾರಿ ಹಂಚಿಕೊಂಡಿದ್ದಾರೆ. ಹಾಗಿದ್ದರೂ ಇದುವರೆಗೆ ಸ್ನೇಹದ ಬಗ್ಗೆ ಅಧಿಕೃತವಾಗಿ ಖಚಿತಪಡಿಸಿಲ್ಲ.

ಅಂದ ಹಾಗೆ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿರುವ ಕೆ.ಎಲ್. ರಾಹುಲ್, ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್ ಸರಣಿಯ ವೇಳೆ ಗಾಯಗೊಂಡು ತವರಿಗೆ ಮರಳಿದ್ದರು. ಅಲ್ಲದೆ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಉಳಿದಿರುವ ಪಂದ್ಯಗಳಿಗೆ ಅಲಭ್ಯವಾಗಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು