ಭಾರತಾಂಬೆಗೆ ಸಲಾಂ ಹೊಡೆದ ಆಸ್ಟ್ರೇಲಿಯಾ ಕ್ರಿಕೆಟ್ ಅಭಿಮಾನಿ: ವಿಡಿಯೊ ವೈರಲ್

ಬೆಂಗಳೂರು: ಜನಾಂಗೀಯ ನಿಂದನೆ ಆರೋಪದ ನಡುವೆಯೂ ಆಸ್ಟ್ರೇಲಿಯಾ ಕ್ರಿಕೆಟ್ ಅಭಿಮಾನಿಯೊಬ್ಬರು ಭಾರತಾಂಬೆಗೆ ಗೌರವ ಸಲ್ಲಿಸಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹೌದು, ಭಾರತ– ಆಸ್ಟ್ರೇಲಿಯಾ ಟೆಸ್ಟ್ ಸರಣಿ ಆಟಕ್ಕಿಂತಲ್ಲೂ ಹೆಚ್ಚು ಜನಾಂಗೀಯ ನಿಂದನೆಗೇ ಹೆಚ್ಚು ಚರ್ಚೆಯಾಗಿತ್ತು. ಇದೀಗ ಆಸ್ಟ್ರೇಲಿಯಾ ಕ್ರಿಕೆಟ್ ಅಭಿಮಾನಿಯೊಬ್ಬ ‘ವಂದೇ ಮಾತರಂ, ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗುವ ಮೂಲಕ ಭಾರತೀಯರ ಮನಗೆದ್ದಿದ್ದಾನೆ.
#AUSvIND If you can’t beat us, join us! Australian fan cheering for India !#BharatArmy #TeamIndia #BAFamily #COTI 🇮🇳 pic.twitter.com/4w9R6m6UCt
— The Bharat Army (@thebharatarmy) January 20, 2021
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾ ಆಟಗಾರರಾದ ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್ ಅವರಿಗೆ ಕುಡಿದ ಮತ್ತಿನಲ್ಲಿದ್ದ ಪ್ರೇಕ್ಷಕನೊಬ್ಬ ಜನಾಂಗೀಯ ನಿಂದನೆ ಮಾಡಿದ್ದನು.
ಘಟನೆ ಕುರಿತು ಬಿಸಿಸಿಐ, ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಹಲವು ಹಿರಿಯ ಆಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಕ್ರಿಕೆಟ್ ಆಸ್ಟ್ರೇಲಿಯಾ(ಸಿಎ) ಕೂಡ ಭಾರತ ತಂಡಕ್ಕೆ ಕ್ಷಮೆಯಾಚಿಸಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.