ಬುಧವಾರ, ಸೆಪ್ಟೆಂಬರ್ 22, 2021
28 °C

ಆಸ್ಟ್ರೇಲಿಯಾ–ವಿಂಡೀಸ್‌ ಟಿ20 ಸರಣಿ ಮುಂದಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮೆಲ್ಬರ್ನ್‌: ವೆಸ್ಟ್‌ ಇಂಡೀಸ್‌ ವಿರುದ್ಧ ಅಕ್ಟೋಬರ್‌ನಲ್ಲಿ ನಿಗದಿಯಾಗಿದ್ದ ಮೂರು ಟ್ವೆಂಟಿ–20 ಪಂದ್ಯಗಳ ಸರಣಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಕ್ರಿಕೆಟ್‌ ಆಸ್ಟ್ರೇಲಿಯಾ ಮಂಗಳವಾರ ತಿಳಿಸಿದೆ.

ಮೂರು ಪಂದ್ಯಗಳು ಅಕ್ಟೋಬರ್‌ 4, 6 ಹಾಗೂ 9ರಂದು ಕ್ರಮವಾಗಿ ಟೌನ್ಸ್‌ವಿಲ್ಲೆ, ಕೇರ್ನ್ಸ್ ಹಾಗೂ ಗೋಲ್ಡ್‌ಕೋಸ್ಟ್‌ನಲ್ಲಿ ನಿಗದಿಯಾಗಿದ್ದವು.

ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ಟ್ವೆಂಟಿ–20 ವಿಶ್ವಕಪ್‌ಗೆ ಅಭ್ಯಾಸ ಎಂಬಂತೆ ಈ ಸರಣಿಯನ್ನು ಗೊತ್ತು ಮಾಡಲಾಗಿತ್ತು. ಕೋವಿಡ್‌ ಸೋಂಕು ಪ್ರಕರಣಗಳಲ್ಲಿ ಏರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಎರಡೂ ಕ್ರಿಕೆಟ್‌ ಮಂಡಳಿಗಳು ಹೋದ ತಿಂಗಳು ಸರಣಿಯನ್ನು ಮುಂದೂಡಲು ನಿರ್ಧರಿಸಿದ್ದವು.

’ವಿಂಡೀಸ್‌ ಕ್ರಿಕೆಟ್‌ ಮಂಡಳಿಯೊಂದಿಗೆ ಚರ್ಚಿಸಿ ಸರಣಿಯನ್ನು ಮುಂದೂಡಲು ತೀರ್ಮಾನಿಸಲಾಗಿದೆ. ಆಸ್ಟ್ರೇಲಿಯಾದಲ್ಲಿ ಮರುನಿಗದಿಯಾಗಲಿರುವ ಟ್ವೆಂಟಿ–20 ವಿಶ್ವಕಪ್ ಟೂರ್ನಿಯ‌ (2021 ಅಥವಾ 2022) ಸಂದರ್ಭದಲ್ಲಿಯೇ ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಯನ್ನು ನಡೆಸಲಾಗುವುದು‘ ಎಂದು ಕ್ರಿಕೆಟ್‌ ಆಸ್ಟ್ರೇಲಿಯಾ ಟ್ವೀಟ್‌ ಮಾಡಿದೆ.

ಎರಡೂ ದೇಶಗಳ ಪ್ರಮುಖ ಕ್ರಿಕೆಟಿಗರು ಸೆಪ್ಟೆಂಬರ್‌ 19ರಿಂದ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನಲ್ಲಿ ನಡೆಯಲಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ.

ಆಸ್ಟ್ರೇಲಿಯಾ ತಂಡವು ಜಿಂಬಾಬ್ವೆ ಎದುರು ಆಡಬೇಕಿದ್ದ ಏಕದಿನ ಸರಣಿಯು ಈಗಾಗಲೇ ಮುಂದೂಡಿಕೆಯಾಗಿದೆ. ಭಾನುವಾರದಿಂದ ಈ ಸರಣಿ ನಡೆಯಬೇಕಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು