ಗುರುವಾರ , ಜನವರಿ 27, 2022
21 °C

ಆಸ್ಟ್ರೇಲಿಯಾ ಕ್ರಿಕೆಟಿಗ ಮ್ಯಾಕ್ಸ್‌ವೆಲ್‌ಗೆ ಕೋವಿಡ್ ಪಾಸಿಟಿವ್

ಪಿಟಿಐ Updated:

ಅಕ್ಷರ ಗಾತ್ರ : | |

ಮೆಲ್ಬರ್ನ್‌: ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮ್ಯಾಕ್ಸ್‌ವೆಲ್‌ ಅವರು ಬಿಗ್ ಬ್ಯಾಷ್ ಲೀಗ್‌ನಲ್ಲಿ (ಬಿಬಿಎಲ್‌) ಮೆಲ್ಬರ್ನ್‌ ಸ್ಟಾರ್ಸ್‌ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಫ್ರಾಂಚೈಸಿ ಪರ ಕೋವಿಡ್ ಸೋಂಕಿಗೆ ತುತ್ತಾದ 13ನೇ ಆಟಗಾರ ಎನಿಸಿದ್ದಾರೆ.

ಮೆಲ್ಬರ್ನ್ ರೆನೆಗೇಡ್ಸ್ ವಿರುದ್ಧದ ಪಂದ್ಯ ಸೋಮವಾರ ನಡೆದ ಪಂದ್ಯದ ಬಳಿಕ ಮ್ಯಾಕ್ಸ್‌ವೆಲ್‌ ಕೋವಿಡ್‌ ಪರೀಕ್ಷೆಗೆ ಒಳಪಟ್ಟಿದ್ದರು. ಬುಧವಾರ ವರದಿ ಪಾಸಿಟಿವ್ ಬಂದಿದೆ.

ಕೋವಿಡ್‌ ಪ್ರಕರಣಗಳು ಏರಿಕೆಯಾದ ಹಿನ್ನೆಲೆಯಲ್ಲಿ ಟೂರ್ನಿಯ ಕೆಲವು ಪಂದ್ಯಗಳನ್ನು ಮುಂದೂಡಲಾಗಿದೆ.

ಕಳೆದ ಐಪಿಎಲ್‌ ಟೂರ್ನಿಯಲ್ಲಿ ಆರ್‌ಸಿಬಿ ಪರ ಕಣಕ್ಕಿಳಿದಿದ್ದ ಮ್ಯಾಕ್ಸ್‌ವೆಲ್‌, ಉತ್ತಮ ಪ್ರದರ್ಶನ ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು