ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಟ್ ಕೊಹ್ಲಿ ನಿಗದಿತ ಓವರ್‌ಗಳ ಕ್ರಿಕೆಟ್‌ನ ಶ್ರೇಷ್ಠ ಬ್ಯಾಟರ್: ರಿಕಿ ಪಾಂಟಿಂಗ್

Last Updated 18 ಅಕ್ಟೋಬರ್ 2022, 9:34 IST
ಅಕ್ಷರ ಗಾತ್ರ

ಬ್ರಿಸ್ಬೇನ್‌: ಆಧುನಿಕ ಕ್ರಿಕೆಟ್‌ನ ಸ್ಟಾರ್‌ ಬ್ಯಾಟರ್‌ ಎನಿಸಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ, ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಆದರೆ, ಅವರು ಸಾರ್ವಕಾಲಿಕ ಶ್ರೇಷ್ಠ ಬ್ಯಾಟರ್‌ ಹೌದೇ? ಅಲ್ಲವೇ? ಎಂಬಚರ್ಚೆ ಸಾಕಷ್ಟು ದಿನಗಳಿಂದ ನಡೆಯುತ್ತಲೇ ಇದೆ. ಇದೀಗ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಈ ವಿಚಾರದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.ನಿಗದಿತ ಓವರ್‌ ಕ್ರಿಕೆಟ್‌ ಅತ್ಯುತ್ತಮ ಬ್ಯಾಟರ್‌ ವಿರಾಟ್‌ ಕೊಹ್ಲಿ ಎಂದು ಅವರು ಶ್ಲಾಘಿಸಿದ್ದಾರೆ.

ಪಾಂಟಿಂಗ್‌, ಸೋಮವಾರ ನಡೆದ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳ ಅಭ್ಯಾಸ ಪಂದ್ಯದ ವೇಳೆ ವೀಕ್ಷಕ ವಿವರಣೆ ನೀಡುವಾಗ ಕೊಹ್ಲಿ ಕುರಿತು ಮಾತನಾಡಿದ್ದಾರೆ.

'ಅವರು (ಕೊಹ್ಲಿ) ತಮ್ಮ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ಟೆಸ್ಟ್‌ ಸರಣಿಯಲ್ಲಿ ಗೆಲುವು ಸಾಧಿಸಿದ್ದು ಅಮೋಘವಾದದ್ದು. ನಾನು ಈವರೆಗೂ ನಿಗದಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಅವರಂತಹ ಬ್ಯಾಟರ್‌ ಅನ್ನು ನೋಡಿಲ್ಲ. ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಅವರ ಸಾಧನೆ ನಂಬಲಸಾಧ್ಯವಾದದ್ದು. ಅವರ ದಾಖಲೆಗಳು ಅದ್ಭುತವಾದವು' ಎಂದು ಅಭಿಪ್ರಾಯಪಟ್ಟಿದ್ದಾರೆ.

2022ರ ಟಿ20 ಕ್ರಿಕೆಟ್‌ ವಿಶ್ವಕಪ್‌ ಸಲುವಾಗಿ ಕೊಹ್ಲಿ ಆಸ್ಟ್ರೇಲಿಯಾದಲ್ಲಿದ್ದಾರೆ. ಎರಡು ತಿಂಗಳ ಹಿಂದಷ್ಟೇ ಅವರ ಫಾರ್ಮ್‌ ಕುರಿತು ಪ್ರಶ್ನೆಗಳು ಎದ್ದಿದ್ದವು. ಆದರೆ, ಕಳೆದ ತಿಂಗಳು ನಡೆದ ಏಷ್ಯಾಕಪ್‌ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಟೀಕಾಕಾರರಿಗೆ ತಕ್ಕ ಉತ್ತರ ನೀಡಿದ್ದರು. ಆ ಟೂರ್ನಿಯಲ್ಲಿ ಶತಕವನ್ನೂ ಸಿಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT