ಅಡಿಲೇಡ್: ಭಾರತ ವಿರುದ್ಧ ಸಾಗುತ್ತಿರುವ ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಈಗಾಗಲೇ 0-1ರ ಅಂತರದ ಹಿನ್ನಡೆಗೊಳಗಾಗಿರುವ ಆಸ್ಟ್ರೇಲಿಯಾ ಎರಡನೇ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಮಗದೊಂದು ಆಘಾತಕ್ಕೊಳಗಾಗಿದೆ.

ತಂಡದ ಅನುಭವಿ ವೇಗದ ಬೌಲರ್ ಜೋಶ್ ಹ್ಯಾಜಲ್ವುಡ್ ಗಾಯದ ಸಮಸ್ಯೆಯಿಂದಾಗಿ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಅಡಿಲೇಡ್ನಲ್ಲಿ ನಡೆಯಲಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯವು ಡಿಸೆಂಬರ್ 6ರಂದು ಆರಂಭವಾಗಲಿದೆ.

ಹ್ಯಾಜಲ್ವುಡ್ ದೇಹದ ಎಡಭಾಗದಲ್ಲಿ ನೋವು ಉಲ್ಬಣಗೊಂಡಿದೆ. ಅವರಿಗೆ ವಿಶ್ರಾಂತಿ ಸೂಚಿಸಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.

ಅಡಿಲೇಡ್ ಟೆಸ್ಟ್ ಪಂದ್ಯಕ್ಕೆ ಸೀನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಇಬ್ಬರು ವೇಗಿಗಳು ಇನ್ನಷ್ಟೇ ಚೊಚ್ಚಲ ಪಂದ್ಯ ಆಡಬೇಕಿದೆ. ಇದಕ್ಕೂ ಮೊದಲು ಬ್ಯೂ ವೆಬ್ಸ್ಟರ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿತ್ತು.

ಹಾಗಿದ್ದರೂ ಹ್ಯಾಜಲ್ವುಡ್ ಅನುಪಸ್ಥಿತಿಯಲ್ಲಿ ಸ್ಕಾಟ್ ಬೊಲಂಡ್ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಅಭ್ಯಾಸ ಪಂದ್ಯ; ಮೊದಲ ದಿನದಾಟ ರದ್ದು...

ಏತನ್ಮಧ್ಯೆ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ವಿರುದ್ಧದ ಎರಡು ದಿನಗಳ ಅಭ್ಯಾಸ ಪಂದ್ಯದ ಮೊದಲ ದಿನದಾಟ ಮಳೆಯಿಂದಾಗಿ ರದ್ದುಗೊಂಡಿದೆ.
.ಜೈಸ್ವಾಲ್ ಜೊತೆ ರಾಹುಲ್ ಇನಿಂಗ್ಸ್ ಆರಂಭಿಸಬೇಕು; ರೋಹಿತ್ ನಂ.3: ಪೂಜಾರ.ICC Test Rankings: ಅಗ್ರಸ್ಥಾನಕ್ಕೇರಿದ ಬೂಮ್ರಾ, ಜೈಸ್ವಾಲ್ ನಂ.2 .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.