ಬುಧವಾರ, ಏಪ್ರಿಲ್ 14, 2021
31 °C

100 ಎಸೆತಗಳ ಟೂರ್ನಿಗೆ ಎಲಿಸ್ ಪೆರಿ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಲಂಡನ್: ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ಆಲ್‌ರೌಂಡರ್‌ ಎಲಿಸ್ ಪೆರಿ ಇಂಗ್ಲೆಂಡ್‌ನಲ್ಲಿ ನಡೆಯಲಿರುವ 100 ಎಸೆತಗಳ ಟೂರ್ನಿಯ ಮೊದಲ ಆವೃತ್ತಿಯಲ್ಲಿ ಆಡಲು ಮುಂದಾಗಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯ ವರ್ಷದ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ಎಲಿಸ್ ಪೆರಿ ಬರ್ಮಿಂಗ್‌ಹ್ಯಾಂ ಫೀನಿಕ್ಸ್ ತಂಡದಲ್ಲಿ ಆಡಲು ಒಪ್ಪಿಕೊಂಡಿದ್ದಾರೆ. 30 ವರ್ಷದ ಪೆರಿ, ಮಹಿಳೆಯರ ಏಕದಿನ ಕ್ರಿಕೆಟ್‌ನ ಆಲ್‌ರೌಂಡರ್‌ಗಳ ಪಟ್ಟಿಯ ಅಗ್ರ ಸ್ಥಾನದಲ್ಲಿದ್ದಾರೆ. ಟಿ20 ರ‍್ಯಾಂಕಿಂಗ್‌ ಪಟ್ಟಿಯ ಅಗ್ರ ಸ್ಥಾನದಲ್ಲಿರುವ ನ್ಯೂಜಿಲೆಂಡ್‌ನ ಸೋಫಿ ಡಿವೈನ್ ಕೂಡ ಫೀನಿಕ್ಸ್ ತಂಡದಲ್ಲಿ ಇದ್ದಾರೆ.

‘ಎಲಿಸ್ ಪೆರಿ ವಿಶ್ವದ ಅತ್ಯುತ್ತಮ ಕ್ರಿಕೆಟ್ ಪಟುಗಳಲ್ಲಿ ಒಬ್ಬರಾಗಿದ್ದು ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸುವ ಸಾಮರ್ಥ್ಯವಿದೆ’ ಎಂದು ಫೀನಿಕ್ಸ್ ಕೊಚ್‌ ಬೆನ್ ಸಾಯರ್ ಅಭಿಪ್ರಾಯಪಟ್ಟಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು