ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಸ್ಟ್ರೇಲಿಯಾ ಟಿ20 ಸರಣಿಗೆ ಹಾರ್ದಿಕ್ ಅಲಭ್ಯ?

Published : 9 ನವೆಂಬರ್ 2023, 15:55 IST
Last Updated : 9 ನವೆಂಬರ್ 2023, 15:55 IST
ಫಾಲೋ ಮಾಡಿ
Comments

ನವದೆಹಲಿ: ಗಾಯಗೊಂಡಿರುವ ಹಾರ್ದಿಕ್ ಪಾಂಡ್ಯ ಅವರು ವಿಶ್ವಕಪ್ ಟೂರ್ನಿಯ ನಂತರ ನಡೆಯಲಿರುವ ಆಸ್ಟ್ರೇಲಿಯಾ ಎದುರಿ ಟಿ20 ಸರಣಿಯಲ್ಲಿ ಆಡುವುದು ಅನುಮಾನವಾಗಿದೆ.

ಇದರಿಂದಾಗಿ  ಅವರ ಬದಲಿಗೆ ಸೂರ್ಯಕುಮಾರ್ ಯಾದವ್ ಅಥವಾ ಋತುರಾಜ್ ಗಾಯಕವಾಡ್ ಅವರು ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.

ಟಿ20 ತಂಡದ ನಾಯಕರೂ ಆಗಿರುವ ಅವರು ಈಚೆಗೆ ವಿಶ್ವಕಪ್ ಪಂದ್ಯದಲ್ಲಿ ಗಾಯಗೊಂಡಿದ್ದರು. ಎಡಗಾಲಿನ ಪಾದದ ಅಸ್ಥಿರಜ್ಜು ಹಾನಿಯಾಗಿದೆ. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಹೆಚ್ಚು ಸಮಯ ಬೇಕಿದೆ. ಆದ್ದರಿಂದ ಅವರು  ವಿಶ್ವಕಪ್ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಡಿಸೆಂಬರ್ 10ರಿಂದ ನಡೆಯಲಿರುವ ಟಿ20 ಸರಣಿಯಲ್ಲಿ  ಆಡುವ ಭಾರತ ತಂಡದೊಂದಿಗೆ ಅವರು ಪಯಣಿಸುವ ಸಾಧ್ಯತೆ ಇದೆ. ಅಲ್ಲಿಯವರೆಗೂ ಅವರು ವಿಶ್ರಾಂತಿ ತೆಗೆದುಕೊಳ್ಳಬಹುದು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಈ ಟೂರ್ನಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ ಮತ್ತು ವೇಗದ ಬೌಲರ್‌ಗಳು ಆಡುವ ಸಾಧ್ಯತೆ ಇಲ್ಲ. ವಿಶ್ವಕಪ್‌ ಟೂರ್ನಿಯಲ್ಲಿ ಆಡಿರುವ ಅವರೆಲ್ಲರೂ ನಂತರ ವಿಶ್ರಾಂತಿಗೆ ತೆರಳುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT