ಸೋಮವಾರ, ಜೂನ್ 1, 2020
27 °C

ಆಸ್ಟ್ರೇಲಿಯಾ: ಜೂನ್ 6ರಂದು ಕ್ಲಬ್‌ ಕ್ರಿಕೆಟ್ ಆರಂಭ‌

ಪಿಟಿಐ Updated:

ಅಕ್ಷರ ಗಾತ್ರ : | |

ಮೆಲ್ಬರ್ನ್ : ಕೊರೊನಾ ಕಾಟದಿಂದಾಗಿ ಆಸ್ಟ್ರೇಲಿಯಾದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಚಟುವಟಿಕೆಯನ್ನು  ಪುನರಾರಂಭಗೊಳಿಸಲು ವೇದಿಕೆ ಸಿದ್ಧಗೊಂಡಿದ್ದು ಡಾರ್ವಿನ್ ಆ್ಯಂಡ್ ಡಿಸ್ಟ್ರಿಕ್ಟ್ ಕ್ರಿಕೆಟ್ ಟೂರ್ನಿಯ ಪಂದ್ಯಗಳು ಜೂನ್ ಆರರಿಂದ ನಡೆಯಲಿವೆ. 

ಟೂರ್ನಿ ಆರಂಭಕ್ಕೂ ಮೊದಲು ಡಾರ್ವಿನ್ ಕ್ರಿಕೆಟ್ ವ್ಯವಸ್ಥಾಪನಾ ಮಂಡಳಿಯು ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು ಬೌಲರ್‌ಗಳು ಚೆಂಡಿಗೆ ಹೊಳಪು ನೀಡುವುದಕ್ಕಾಗಿ ಎಂಜಲು ತಾಗಿಸುವುದನ್ನು ನಿಷೇಧಿಸಲಾಗಿದೆ. ವ್ಯಾಕ್ಸ್ ಬಳಸಲು ಅಂಪೈರ್‌ಗಳೇ ವ್ಯವಸ್ಥೆ ಮಾಡಲಿದ್ದಾರೆ. ಸರ್ಕಾರದಿಂದ ಪಡೆದ ಪ್ರಮಾಣಪತ್ರವನ್ನು  ಕ್ಲಬ್‌ಗಳು ಹೊಂದಿರಬೇಕು ಎಂಬುದನ್ನು ಕಡ್ಡಾಯ ಮಾಡಲಾಗಿದೆ ಎಂದು ಕ್ರಿಕೆಟ್‌ಗೆ ಸಂಬಂಧಿಸಿದ ವೆಬ್‌ಸೈಟ್ ಕ್ರಿಕೆಟ್ ಡಾಟ್ ಕಾಮ್ ಡಾಟ್ ಎಯು ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು