ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ–ಆಸ್ಟ್ರೇಲಿಯಾ ಮೂರನೇ ಪಂದ್ಯ: ಫಿಂಚ್‌ ಪಡೆಗೆ ಆರಂಭಿಕ ಆಘಾತ

ಏಕದಿನ ಕ್ರಿಕೆಟ್‌ ಸರಣಿ
Last Updated 18 ಜನವರಿ 2019, 3:49 IST
ಅಕ್ಷರ ಗಾತ್ರ

ಮೆಲ್ಬರ್ನ್‌:ಭಾರತತಂಡದೆದುರು ಇಲ್ಲಿನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಕ್ರಿಕೆಟ್‌ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಆರಂಭಿಕ ಆಘಾತ ಅನುಭವಿಸಿದೆ.

ಟಾಸ್‌ ಸೋತರೂ ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಆಸ್ಟ್ರೇಲಿಯಾ0.2 ಓವರ್‌ನಲ್ಲಿ 1 ರನ್‌ ಗಳಿಸಿದ್ದಾಗ ಮಳೆ ಸುರಿಯಿತು. ಹೀಗಾಗಿಪಂದ್ಯವನ್ನು ಸ್ವಲ್ಪ ಹೊತ್ತು ನಿಲ್ಲಿಸಲಾಗಿತ್ತು. ಬಳಿಕ ಇನಿಂಗ್ಸ್‌ ಮುಂದುವರಿಸಿದ ಆಸ್ಟ್ರೇಲಿಯಾ 11 ಓವರ್‌ಗಳಲ್ಲಿ ಎರಡು ವಿಕೆಟ್‌ ಕಳೆದುಕೊಂಡು 32ರನ್‌ ಗಳಿಸಿದೆ.

ಆರಂಭಿಕರಾದ ಅಲೆಕ್ಸ್‌ ಕೇರಿ(5) ಮತ್ತು ನಾಯಕ ಆ್ಯರನ್‌ ಫಿಂಚ್‌(5) ರನ್‌ಗಳಿಸಿ ಭರವಸೆಯ ಬೌಲರ್‌ ಭುವನೇಶ್ವರ್‌ ಕುಮಾರ್‌ಗೆ ವಿಕೆಟ್‌ ಒಪ್ಪಿಸಿದರು. ಸದ್ಯ ಉಸ್ಮಾನ್‌ ಖ್ವಾಜಾ(9) ಹಾಗೂ ಶಾನ್‌ ಮಾರ್ಷ್‌(2) ಕ್ರೀಸ್‌ನಲ್ಲಿದ್ದಾರೆ.

ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್‌ ಸರಣಿ ಗೆದ್ದು ದಾಖಲೆ ಬರೆದಿರುವ ವಿರಾಟ್‌ ಕೊಹ್ಲಿ ನೇತೃತ್ವದ ಭಾರತ,ಈಗ ಆಸಿಸ್‌ನಲ್ಲಿಚೊಚ್ಚಲದ್ವಿಪಕ್ಷೀಯ ಏಕದಿನ ಸರಣಿ ಗೆಲ್ಲಲುಸಜ್ಜಾಗಿದೆ.

ಮೊದಲ ಪಂದ್ಯದಲ್ಲಿ 34ರನ್‌ ಅಂತರ ಸೋಲು ಕಂಡಿದ್ದ ಕೊಹ್ಲಿ ಪಡೆ ಎರಡನೇ ಪಂದ್ಯವನ್ನು ಆರು ವಿಕೆಟ್‌ಗಳಿಂದ ಗೆದ್ದು ಬೀಗಿತ್ತು.ಸದ್ಯ ತಲಾ ಒಂದು ಪಂದ್ಯಗಳಲ್ಲಿ ಗೆಲುವು ಕಂಡಿರುವ ಉಭಯ ತಂಡಗಳಿಗೆ ಸರಣಿ ಕೈವಶ ಮಾಡಿಕೊಳ್ಳಲುಈ ಪಂದ್ಯದಲ್ಲಿ ಗೆಲ್ಲುವುದು ಅನಿವಾರ್ಯವಾಗಿದೆ.

ಆರಂಭಿಕರಾದ ಅಲೆಕ್ಸ್‌ ಕೇರಿ ಮತ್ತು ನಾಯಕ ಆ್ಯರನ್‌ ಫಿಂಚ್‌ ಸತತ ವೈಫಲ್ಯದ ನಡುವೆಯೂ ಉತ್ತಮ ಪ್ರದರ್ಶನ ತೋರುತ್ತಿರುವ ಶಾನ್‌ ಮಾರ್ಷ್‌, ಉಸ್ಮಾನ್‌ ಖ್ವಾಜಾ, ಪೀಟರ್‌ ಹ್ಯಾಂಡ್ಸ್‌ಕಂಬ್‌ ಮತ್ತು ಗ್ಲೆನ್‌ ಮ್ಯಾಕ್ಸ್‌ವೆಲ್‌ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಬಲ ತುಂಬಲಿದ್ದಾರೆ. ಬೌಲಿಂಗ್‌ನಲ್ಲಿಯೂ ಬಲಿಷ್ಠವಾಗಿರುವ ಫಿಂಚ್‌ ಪಡೆ ಭಾರತಕ್ಕೆ ಸೋಲುಣಿಸಿ ಸರಣಿ ಗೆಲ್ಲುವಛಲದಲ್ಲಿದೆ.

Captain @imVkohli wins the toss and elects to bowl first at the 'G#AUSvIND pic.twitter.com/JSPYYCVfNN

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT