ಮಂಗಳವಾರ, ಮೇ 18, 2021
29 °C

ಮೊದಲ ಇನಿಂಗ್ಸ್‌ನಲ್ಲಿ ದಿಟ್ಟ ಆಟವಾಡಿದ ಭಾರತ: 443 ರನ್‌ಗೆ ಡಿಕ್ಲೇರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೆಲ್ಬರ್ನ್‌: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 443 ರನ್‌ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿದೆ.

ಗುರುವಾರ ಎರಡನೇ ದಿನದಾಟ ಆರಂಭಿಸಿದ ಚೇತೇಶ್ವರ ಪೂಜಾರ ಹಾಗೂ ನಾಯಕ ವಿರಾಟ್‌ ಕೊಹ್ಲಿ ಮೂರನೇ ವಿಕೆಟ್‌ಗೆ 170 ರನ್‌ಗಳ ಜೊತೆಯಾಟವಾಡಿದರು. ಕೊಹ್ಲಿ 82ರನ್‌ ಗಳಿಸಿದ್ದ ವೇಳೆ ಮಿಷೆಲ್‌ ಸ್ಟಾರ್ಕ್‌ಗೆ ವಿಕೆಟ್‌ ಒಪ್ಪಿಸಿದರು. ವಿರಾಟ್‌ ವಿಕೆಟ್‌ ಪತನದ ಬೆನ್ನಲ್ಲೇ ಶತಕವೀರ ಪೂಜಾರ(106), ಪ್ಯಾಟ್‌ ಕಮಿನ್ಸ್‌ ಬೌಲಿಂಗ್‌ನಲ್ಲಿ ಪೆವಿಲಿಯನ್‌ ಸೇರಿಕೊಂಡರು.

ಬಳಿಕ ಕ್ರೀಸ್‌ಗೆ ಬಂದ ಅಜಿಂಕ್ಯ ರಹಾನೆ– ರೋಹಿತ್‌ ಶರ್ಮಾ(63) ತಂಡದ ಮೊತ್ತವನ್ನು 360ರ ಗಡಿ ದಾಟಿಸಿದರು. 34 ರನ್‌ ಗಳಿಸಿದ ರಹಾನೆ ಅವರನ್ನು ನೇಥನ್‌ ಲಯನ್‌ ಎಲ್‌ಬಿಡಬ್ಲ್ಯು ಬಲೆಗೆ ಬೀಳಿಸಿದರು. ತಾಳ್ಮೆಯ ಆಟವಾಡಿದ ರೋಹಿತ್‌ 10 ನೇ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು.

ಬಾಕ್ಸಿಂಗ್‌ ಡೇ ಪಂದ್ಯದಲ್ಲಿ ಆಸಿಸ್‌ ವಿರುದ್ಧ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಭಾರತ ಮೊದಲ ದಿನದಾಟದ ಅಂತ್ಯಕ್ಕೆ 89 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 215 ರನ್‌ ಗಳಿಸಿತ್ತು.

ಸದ್ಯ ಎರಡನೇ ದಿನದಾಟ ಮುಕ್ತಾಯವಾಗಿದ್ದು ಆಸ್ಟ್ರೇಲಿಯಾ ತಂಡ 6 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 8 ರನ್‌ ಗಳಿಸಿದೆ.

ಮಾರ್ಕಸ್‌ ಹ್ಯಾರಿಸ್‌(5) ಹಾಗೂ ಆ್ಯರನ್‌ ಫಿಂಚ್‌(3) ಕ್ರೀಸ್‌ನಲ್ಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು