ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ವಿಶ್ವಕಪ್: ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್

ಫೈನಲ್ ಪಂದ್ಯ
Last Updated 3 ಏಪ್ರಿಲ್ 2022, 1:57 IST
ಅಕ್ಷರ ಗಾತ್ರ

ಕ್ರೈಸ್ಟ್ ಚರ್ಚ್‌: ಐಸಿಸಿ ಮಹಿಳೆಯರ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಇಂದು (ಭಾನುವಾರ) ನಡೆಯುತ್ತಿರುವ ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ –ಆಸ್ಟ್ರೇಲಿಯಾ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಸದ್ಯ ಟಾಸ್‌ ಗೆದ್ದಿರುವ ಇಂಗ್ಲೆಂಡ್‌, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಬ್ಯಾಟಿಂಗ್ ಆರಂಭಿಸಿರುವ ಆಸ್ಟ್ರೇಲಿಯಾ 15ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 68ರನ್ ಗಳಿಸಿದೆ. ಅಲಿಸಾ ಹೀಲಿ 29* ಹಾಗೂರಚೆಲ್ ಹೇನ್ಸ್ 36* ಕ್ರೀಸ್‌ನಲ್ಲಿದ್ದಾರೆ.

ಟೂರ್ನಿಯಿಂದ ಹೊರಬೀಳುವ ಹಂತದಿಂದ ಪುಟಿದೆದ್ದು ಗೆಲುವಿನ ಹಾದಿಯಲ್ಲಿ ಮುನ್ನುಗ್ಗಿದ ಇಂಗ್ಲೆಂಡ್ ತಂಡ ವಿಶ್ವಕಪ್ ಟೂರ್ನಿಯ ಪ್ರಶಸ್ತಿ ಹಂತಕ್ಕೆ ಲಗ್ಗೆ ಇರಿಸಿದೆ.

ಗುರುವಾರ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಇಂಗ್ಲೆಂಡ್ 137 ರನ್‌ಗಳಿಂದ ಮಣಿಸಿತ್ತು. ಹಾಲಿ ಚಾಂಪಿಯನ್ ಇಂಗ್ಲೆಂಡ್ ಲೀಗ್‌ ಹಂತದ ಆರಂಭದಲ್ಲಿ ಸತತ ಮೂರು ಪಂದ್ಯಗಳನ್ನು ಸೋತಿತ್ತು. ನಂತರ ಎಲ್ಲ ನಾಲ್ಕು ಪಂದ್ಯಗಳನ್ನು ಗೆದ್ದು ನಾಲ್ಕರ ಘಟ್ಟ ಪ್ರವೇಶಿಸಿತ್ತು.

ವೆಸ್ಟ್ ಇಂಡೀಸ್ ಎದುರು ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸಂಪೂರ್ಣ ಪಾರಮ್ಯ ಮೆರೆದಿದ ಆಸ್ಟ್ರೇಲಿಯಾ ತಂಡ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪ್ರವೇಶಿಸಿತ್ತು. ಬೇಸಿನ್ ರಸರ್ವ್‌ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ 157 ರನ್‌ಗಳಿಂದ ಜಯ ಗಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT