T20 World Cup: ಬಾಂಗ್ಲಾ ವಿರುದ್ಧ ಫಿಂಚ್ ಬಳಗಕ್ಕೆ ಭರ್ಜರಿ ಗೆಲುವು

ದುಬೈ: ಆಸ್ಟ್ರೇಲಿಯಾ ತಂಡವು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ಬಾಂಗ್ಲಾದೇಶ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು.
ಟಾಸ್ ಗೆದ್ದು ಫಿಲ್ಡಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ, ಬಾಂಗ್ಲಾದೇಶವನ್ನು ಕೇವಲ 73 ರನ್‌ಗಳಿಗೆ ಕಟ್ಟಿ ಹಾಕಿತು. ಬಾಂಗ್ಲಾ ಬ್ಯಾಟ್ಸ್‌ಮನ್‌ಗಳು ಮತ್ತೆ ಈ ಟೂರ್ನಿಯಲ್ಲಿ ಲಯ ಕಂಡುಕೊಳ್ಳುವಲ್ಲಿ ವಿಫಲರಾದರು. 15 ಓವರ್‌ಗಳಲ್ಲಿ ಕೇವಲ 73 ರನ್‌ಗಳಿಗೆ ಬಾಂಗ್ಲಾದೇಶ ಆಲೌಟ್ ಆಯಿತು. ಆಸ್ಪ್ರೇಲಿಯಾ ಪರ ಜಂಪಾ 5 ವಿಕೆಟ್ ಪಡೆದುಕೊಂಡರು.
ಅಲ್ಪ ಮೊತ್ತ ಬೆನ್ನತ್ತಿದ ಆಸ್ಟ್ರೇಲಿಯಾ ಕೇವಲ 6.2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಸುಲಭವಾಗಿ ಗುರಿ ಮುಟ್ಟಿತು. ಆ ಮೂಲಕ ಆಸ್ಟ್ರೇಲಿಯಾ ಪಾಯಿಂಟ್ ಪಟ್ಟಿಯಲ್ಲಿ 6 ಅಂಕಗಳನ್ನು ಪಡೆದಿದೆ. ಇತ್ತ ಬಾಂಗ್ಲಾದೇಶ ಟೂರ್ನಿಯಿಂದ ಹೊರ ಬಿದ್ದಿದೆ.
ಸ್ಕೋರ್
ಬಾಂಗ್ಲಾದೇಶ: 73/ 10 (15)
ಆಸ್ಟ್ರೇಲಿಯಾ: 78/2 (6.2)
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.