ಬೆಂಗಳೂರು: ಅಲ್ಲು ಅರ್ಜುನ್ ನಾಯಕನಟನಾಗಿ ನಟಿಸಿರುವ ಬ್ಲಾಕ್ ಬಸ್ಟರ್ ಹಿಟ್ ತೆಲುಗು ಸಿನಿಮಾ ‘ಅಲಾ ವೈಕುಂಠಪುರಮುಲೋ’ ಚಿತ್ರದ ‘ಬುಟ್ಟ ಬೊಮ್ಮ’ ಹಾಡು ವಿದೇಶಗಳಲ್ಲೂ ಸದ್ದು ಮಾಡುತ್ತಿದ್ದೆ.

ಕೊರೊನಾ ವೈರಸ್ನಿಂದಾಗಿ ಇಡೀ ಜಗತ್ತೇ ಲಾಕ್ಡೌನ್ ಆಗಿದೆ. ಮನೆಯಲ್ಲಿ ಕಾಲ ಕಳೆಯುತ್ತಿರುವ ಜನರು ಸಾಮಾಜಿಕ ಜಾಲತಾಣಗಳು, ವಾಹಿನಿಗಳ ಮೂಲಕ ಮನರಂಜನೆ ಪಡೆಯುತ್ತಿದ್ದಾರೆ. ಟಿಕ್ಟಾಕ್ ವಿಡಿಯೊ ತಾಣದಲ್ಲಿ ‘ಬುಟ್ಟ ಬೊಮ್ಮ’ ಹಾಡಿಗೆ
ಭಾರತೀಯರು ಮಾತ್ರವಲ್ಲದೇ ವಿದೇಶಿಯರು ಹೆಜ್ಜೆ ಹಾಕುತ್ತಿದ್ದಾರೆ.

ಈ ಸಾಲಿಗೆ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಕೂಡ ಸೇರುತ್ತಾರೆ. ತಮ್ಮ ಪತ್ನಿ, ಮಗಳೊಂದಿಗೆ ‘ಬುಟ್ಟ ಬೊಮ್ಮ’ ಹಾಡಿಗೆ ಹೆಜ್ಜೆ ಹಾಕಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ಸಾಕಷ್ಟು ವೈರಲ್ ಆಗಿದ್ದು ಇನ್ಸ್ಟಾಗ್ರಾಂ ಹಾಗೂ ಟ್ವಿಟರ್ನಲ್ಲಿಭರ್ಜರಿ ರೆಸ್ಪಾನ್ಸ್ ಪಡೆದಿದೆ.

ಡೇವಿಡ್ ವಾರ್ನರ್ ಅವರ ‘ಬುಟ್ಟ ಬೊಮ್ಮ’ ಡ್ಯಾನ್ಸ್ ವಿಡಿಯೊವನ್ನು ತೆಲುಗು ಕ್ರಿಕೆಟ್ ಪ್ರೇಕ್ಷಕರಂತೂ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಏಕೆಂದರೆ ವಾರ್ನರ್ ಐಪಿಎಲ್ನಲ್ಲಿ ಸನ್ರೈಸರ್ಸ್ಹೈದರಾಬಾದ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಡ್ಯಾನ್ಸ್ ಮಾಡುವಾಗ ತಮ್ಮ ತಂಡದಜರ್ಸಿ ತೊಟ್ಟಿದ್ದು ವಿಶೇಷವಾಗಿತ್ತು.

ಭಾರಿ ಜನಪ್ರಿಯತೆ ಗಳಿಸಿರುವ ಈ ಹಾಡು ಯೂಟ್ಯೂಬ್ನಲ್ಲಿ 10 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.