ಇಂಗ್ಲೆಂಡ್ ತಂಡಕ್ಕೆ ಜ್ಯಾಕ್ಸ್
ಆಲ್‌ರೌಂಡರ್ ವಿಲ್ ಜ್ಯಾಕ್ಸ್ ಅವರು ಆಸ್ಟ್ರೇಲಿಯಾ ವಿರುದ್ಧದ ಆ್ಯಷಸ್ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಪರ ಕಣಕ್ಕಿಳಿಯಲಿದ್ದಾರೆ. ಅವರು ಗಾಯಾಳು ಮಾರ್ಕ್ ವುಡ್ ಬದಲಿಗೆ ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಜ್ಯಾಕ್ಸ್ ಅವರು 2022ರ ಡಿಸೆಂಬರ್‌ನಲ್ಲಿ ಪಾಕಿಸ್ತಾನ ವಿರುದ್ಧ ಕೊನೆಯ ಬಾರಿ ಟೆಸ್ಟ್ ಪಂದ್ಯ ಆಡಿದ್ದರು. ಬಳಿಕ ಸೀಮಿತ ಓವರ್‌ಗಳ ಪಂದ್ಯಗಳಲ್ಲಷ್ಟೇ ಆಡಿದ್ದರು.