ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ರ‍್ಯಾಂಕಿಂಗ್‌: ಅಕ್ಷರ್‌, ಜೈಸ್ವಾಲ್‌ಗೆ ಬಡ್ತಿ

Published 17 ಜನವರಿ 2024, 17:13 IST
Last Updated 17 ಜನವರಿ 2024, 17:13 IST
ಅಕ್ಷರ ಗಾತ್ರ

ದುಬೈ: ಭಾರತದ ಎಡಗೈ ಸ್ಪಿನ್ನರ್ ಅಕ್ಷರ್‌ ಪಟೇಲ್‌ ಮತ್ತು ಆರಂಭಿಕ ಬ್ಯಾಟರ್‌ ಯಶಸ್ವಿ ಜೈಸ್ವಾಲ್‌ ಅವರು ಐಸಿಸಿ ಪುರುಷರ ಟಿ20 ರ‍್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದು, ಅಗ್ರ 10 ಆಟಗಾರರಲ್ಲಿ ಸ್ಥಾನ ಪಡೆದಿದ್ದಾರೆ.

ಬೌಲಿಂಗ್‌ನಲ್ಲಿ ಅಕ್ಷರ್‌ 5ನೇ ಸ್ಥಾನಕ್ಕೆ ಏರಿದ್ದು, ಬ್ಯಾಟಿಂಗ್‌ನಲ್ಲಿ ಜೈಸ್ವಾಲ್‌ 6ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಇದು ಇವರಿಬ್ಬರ ವೃತ್ತಿಜೀವನದ ಶ್ರೇಷ್ಠ ಸಾಧನೆಯಾಗಿದೆ. ಅಫ್ಗಾನಿಸ್ತಾನದ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಇವರು ಉತ್ತಮ ಪ್ರದರ್ಶನ ನೀಡಿದ್ದರು.

ಅಫ್ಗನ್‌ ವಿರುದ್ಧದ ಎರಡನೇ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದ ಭಾರತದ ಶಿವಂ ದುಬೆ ಅವರು 265ನೇ ಸ್ಥಾನದಿಂದ 58ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಶುಭ್‌ಮನ್ ಗಿಲ್ 7 ಸ್ಥಾನ ಮೇಲೇರಿ 60ನೇ ಸ್ಥಾನ ಪಡೆದರೆ, ಎಡಗೈ ಬ್ಯಾಟರ್‌ ತಿಲಕ್ ವರ್ಮಾ 3 ಬಡ್ತಿ ಹೊಂದಿ 61ನೇ ಸ್ಥಾನದಲ್ಲಿದ್ದಾರೆ. 

ನ್ಯೂಜಿಲೆಂಡ್ ವಿರುದ್ಧ ಸತತ ಎರಡು ಅರ್ಧಶತಕ ಗಳಿಸಿದ ಪಾಕಿಸ್ತಾನದ ಸ್ಟಾರ್ ಬ್ಯಾಟರ್ ಬಾಬರ್ ಅಜಂ ಒಂದು ಸ್ಥಾನ ಮೇಲೇರಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಭಾರತದ ಸೂರ್ಯಕುಮಾರ್ ಯಾದವ್‌ ಬ್ಯಾಟಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದರೆ, ಋತುರಾಜ್‌ ಗಾಯಕವಾಡ್‌ 9ನೇ ಸ್ಥಾನದಲ್ಲಿದ್ದಾರೆ.

ಬೌಲಿಂಗ್ ಕ್ರಮಾಂಕದಲ್ಲಿ ಶ್ರೀಲಂಕಾದ ಸ್ಪಿನ್ನರ್‌ಗಳಾದ ವನಿಂದು ಹಸರಂಗ ಮತ್ತು ಮಹೀಶ ತೀಕ್ಷಣ ಜಂಟಿಯಾಗಿ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇಂಗ್ಲೆಂಡ್‌ನ ಅದಿಲ್‌ ರಶೀಲ್‌ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ರವಿ ಬಿಷ್ಣೋಯಿ 6ನೇ ಸ್ಥಾನ ಪಡೆದಿದ್ದರೆ, ಎಡಗೈ ವೇಗಿ ಅರ್ಷದೀಪ್ ಸಿಂಗ್ ನಾಲ್ಕು ಸ್ಥಾನ ಮೇಲೇರಿ 21ನೇ ಸ್ಥಾನಕ್ಕೆ ತಲುಪಿದ್ದಾರೆ. 

ಯಶಸ್ವಿ ಜೈಸ್ವಾಲ್
ಯಶಸ್ವಿ ಜೈಸ್ವಾಲ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT