ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್ ಪಂದ್ಯಗಳಿಗೆ ಹೈದರಾಬಾದ್ ಸೂಕ್ತ ಸ್ಥಳ: ಮೊಹಮ್ಮದ್ ಅಜರುದ್ಧೀನ್ ಅಭಿಮತ

Last Updated 1 ಮಾರ್ಚ್ 2021, 15:25 IST
ಅಕ್ಷರ ಗಾತ್ರ

ಹೈದರಾಬಾದ್: ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಪಂದ್ಯಗಳನ್ನು ಆಯೋಜಿಸಲು ಹೈದರಾಬಾದ್ ಸೂಕ್ತ ತಾಣ ಎಂದು ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಮೊಹಮ್ಮದ್ ಅಜರುದ್ಧೀನ್ ಹೇಳಿದ್ದಾರೆ.

ಈ ಬಾರಿಯ ಐಪಿಎಲ್ ಟೂರ್ನಿಯನ್ನು ಭಾರತದಲ್ಲಿ ಆಯೋಜಿಸಲು ಸಿದ್ಧತೆ ನಡೆದಿದೆ. ಅದಕ್ಕಾಗಿ ಆರು ಸ್ಥಳಗಳನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಸುದ್ದಿಗಳಿವೆ. ಆದರೆ ಆ ಪಟ್ಟಿಯಲ್ಲಿ ಹೈದರಾಬಾದ್ ಇಲ್ಲದಿರುವ ಬಗ್ಗೆ ತೆಲಂಗಾಣದ ಸಚಿವ ಕೆ.ಟಿ. ರಾಮರಾವ್ ಆಕ್ಷೇಪ ವ್ಯಕ್ತಪಡಿಸಿದ್ದರು. ಹೈದರಾಬಾದ್‌ನಲ್ಲಿಯೂ ಪಂದ್ಯಗಳು ನಡೆಯಬೇಕು ಎಂದು ಆಗ್ರಹಿಸಿದ್ದರು.

ಸಚಿವರಿಗೆ ಬೆಂಬಲ ವ್ಯಕ್ತಪಡಿಸಿರುವ ಅಜರ್, ’ಕೆಟಿಟಿಆರ್‌ ಅವರ ಮಾತಿಗೆ ನನ್ನ ಸಹಮತವಿದೆ. ಐಪಿಎಲ್ ಪಂದ್ಯಗಳನ್ನು ಬಯೋಬಬಲ್ ಶಿಷ್ಟಾಚಾರದಲ್ಲಿ ಆಯೋಜಿಸುವ ಸಾಮರ್ಥ್ಯ ಹೈದರಾಬಾದಿಗೆ ಇದೆ. ಆದ್ದರಿಂದ ಇತ್ತ ಗಮನ ಕೊಡಿ‘ ಎಂದು ಅಜರ್ ಟ್ವೀಟ್ ಮಾಡಿದ್ದು, ಬಿಸಿಸಿಐಗೆ ಟ್ಯಾಗ್ ಮಾಡಿದ್ದಾರೆ.

ಈ ಮೊದಲು ಮುಂಬೈನ ನಾಲ್ಕು ಮೈದಾನಗಳಲ್ಲಿಯೇ ಐಪಿಎಲ್ ಟೂರ್ನಿಯನ್ನು ನಡೆಸುವ ಕುರಿತು ಬಿಸಿಸಿಐ ಚಿಂತನೆ ನಡೆಸುತ್ತಿತ್ತು. ಆದರೆ ಕೆಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ಕೋವಿಡ್ –19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಪಂದ್ಯಗಳನ್ನು ಬೇರೆಡೆಗೆ ಸ್ಥಳಾಂತರಿಸು ಕುರಿತು ಮಾತುಕತೆಗಳು ನಡೆಯುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT