ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿ–20 ಕ್ರಿಕೆಟ್‌ನಲ್ಲಿ ಅತಿ ವೇಗದ 2500 ರನ್: ಕೊಹ್ಲಿ ದಾಖಲೆ ಹಿಂದಿಕ್ಕಿದ ಬಾಬರ್

Last Updated 12 ನವೆಂಬರ್ 2021, 3:11 IST
ಅಕ್ಷರ ಗಾತ್ರ

ದುಬೈ: ಟ್ವೆಂಟಿ–20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗದ 2500 ರನ್‌ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಹಿಂದಿಕ್ಕಿದ್ದಾರೆ.

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ನಡೆದ ಎರಡನೇ ಸೆಮಿಪೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಜಂ ದಾಖಲೆ ನಿರ್ಮಿಸಿದರು.

ಕೊಹ್ಲಿ ಅವರು 68 ಇನ್ನಿಂಗ್ಸ್‌ಗಳಲ್ಲಿ 2500 ರನ್‌ ಗಡಿ ತಲುಪಿದ್ದರೆ ಅಜಂ ಅವರು ಕೇವಲ 62 ಇನ್ನಿಂಗ್ಸ್‌ಗಳಲ್ಲೇ ಈ ಸಾಧನೆ ಮಾಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 34 ಎಸೆತ ಎದುರಿಸಿ 39 ರನ್ ಗಳಿಸಿದ ಅಜಂ, ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 303 ರನ್‌ ಗಳಿಸಿದ್ದಾರೆ. ಈ ಬಾರಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ 300ರ ಗಡಿ ದಾಟಿದ ಮೊದಲ ಆಟಗಾರನಾಗಿದ್ದಾರೆ.

ಪಾಕಿಸ್ತಾನದ ಇನ್ನೊಬ್ಬ ಆಟಗಾರ ಮೊಹಮ್ಮದ್ ರಿಜ್ವಾನ್ ಅವರು ಪ್ರಸಕ್ತ ಕ್ಯಾಲೆಂಡರ್ ವರ್ಷದಲ್ಲಿ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 1000 ರನ್ ಗಡಿ ದಾಟಿದರು. ಈ ಸಲದ ವಿಶ್ವಕಪ್ ಟೂರ್ನಿಯಲ್ಲಿ ಇವರು 281 ರನ್ ಗಳಿಸಿ ಬಾಬರ್ ಅಜಂ ನಂತರದ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT