ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ತಂಡಕ್ಕೆ ಮತ್ತೆ ಬಾಬರ್‌ ಅಜಂ ಸಾರಥ್ಯ

Published 31 ಮಾರ್ಚ್ 2024, 6:28 IST
Last Updated 31 ಮಾರ್ಚ್ 2024, 6:28 IST
ಅಕ್ಷರ ಗಾತ್ರ

ಲಾಹೋರ್‌: ಟಿ20 ವಿಶ್ವಕಪ್‌ ಟೂರ್ನಿಗೆ ಎರಡು ತಿಂಗಳ ಮುಂಚಿತವಾಗಿ ಪಾಕಿಸ್ತಾನ ಕ್ರಿಕೆಟ್‌ ತಂಡಕ್ಕೆ ಬಾಬರ್‌ ಅಜಂ ಅವರನ್ನು ನಾಯಕರಾಗಿ ಮರುನೇಮಕ ಮಾಡಲಾಗಿದೆ.

ವೇಗದ ಬೌಲರ್ ಶಾಹೀನ್ ಶಾ ಆಫ್ರಿದಿ ಬದಲಿಗೆ ಬಾಬರ್ ಅವರನ್ನು ಭಾನುವಾರ ನೇಮಕಗೊಂಡಿದ್ದಾರೆ. ಜನವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಶಾಹಿನ್‌ ನೇತೃತ್ವದ ಪಾಕಿಸ್ತಾನ ತಂಡವು 1-4 ಅಂತರದಲ್ಲಿ ಸೋತಿತ್ತು. ಅದರ ಬೆನ್ನಲ್ಲೇ ಪಿಸಿಬಿಯ ಆಯ್ಕೆ ಸಮಿತಿಯು ಸರ್ವಾನುಮತದಿಂದ ಈ ನಿರ್ಧಾರ ಕೈಗೊಂಡಿದೆ.

ಭಾರತದಲ್ಲಿ ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಕಳಪೆ ಪ್ರದರ್ಶನದ ಬಳಿಕ ಬಾಬರ್‌ ಅವರನ್ನು ಟಿ20, ಏಕದಿನ ಮತ್ತು ಟೆಸ್ಟ್‌ ತಂಡದ ನಾಯಕತ್ವದಿಂದ ಕೆಳಗಿಳಿಸಲಾಗಿತ್ತು. ಇದೀಗ ಮತ್ತೆ ಟಿ20 ಮತ್ತು ಏಕದಿನ ತಂಡದ ಚುಕ್ಕಾಣಿಯನ್ನು ಅವರ ಹೆಗಲಿಗೆ ವಹಿಸಲಾಗಿದೆ.

ಶಾನ್ ಮಸೂದ್ ಪ್ರಸ್ತುತ ಪಾಕಿಸ್ತಾನ ಟೆಸ್ಟ್‌ ತಂಡವನ್ನು ಮುನ್ನಡೆಸುತ್ತಿದ್ದು, ಅದಕ್ಕೂ ಬಾಬರ್‌ ಅವರನ್ನು ನೇಮಿಸುವ ಸಾಧ್ಯತೆ ಇದೆ. ಈ ಬಗ್ಗೆ ನಂತರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಪಿಸಿಬಿ ಮೂಲಗಳು ತಿಳಿಸಿವೆ.

ಬಾಬರ್ ನಾಯಕತ್ವದಲ್ಲಿ ಪಾಕ್‌ ತಂಡವು ಆಸ್ಟ್ರೇಲಿಯಾದಲ್ಲಿ ನಡೆದ 2022ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಫೈನಲ್‌ ತಲುಪಿತ್ತು. ಈ ಬಾರಿಯ ಟೂರ್ನಿ ಅಮೆರಿಕಾ ಮತ್ತು ವೆಸ್ಟ್‌ಇಂಡೀಸ್‌ನಲ್ಲಿ ಜೂನ್‌ 1ರಂದು ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT