ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಟ್ ಕೊಹ್ಲಿಯ ಮಗದೊಂದು ದಾಖಲೆ ಮುರಿದ ಬಾಬರ್ ಆಜಂ

ಅಕ್ಷರ ಗಾತ್ರ

ಗಾಲೆ: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಜಂ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್‌ಗಳ ಸಾಧನೆ ಮಾಡಿದ್ದಾರೆ.

ಇದರೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗದಲ್ಲಿ 10,000 ರನ್ ಗಳಿಸಿದ ಏಷ್ಯಾದ ಬ್ಯಾಟರ್ ಎನಿಸಿದ್ದಾರೆ.

ಬಾಬರ್ 228ನೇ ಇನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ಆ ಮೂಲಕ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ (232 ಇನಿಂಗ್ಸ್) ದಾಖಲೆ ಮುರಿದಿದ್ದಾರೆ.

ಒಟ್ಟಾರೆ ಪಟ್ಟಿಯಲ್ಲಿ ಬಾಬರ್ 5ನೇ ಸ್ಥಾನದಲ್ಲಿದ್ದಾರೆ. ವೆಸ್ಟ್‌ಇಂಡೀಸ್‌ನ ಮಾಜಿ ದಿಗ್ಗಜ ವಿವ್ ರಿಚರ್ಡ್ಸ್ ಮುಂಚೂಣಿಯಲ್ಲಿದ್ದು (206 ಇನಿಂಗ್ಸ್), ದಕ್ಷಿಣ ಆಫ್ರಿಕಾದ ಹಾಶೀಮ್ ಆಮ್ಲಾ (217), ವೆಸ್ಟ್‌ಇಂಡೀಸ್‌ನ ಬ್ರಿಯಾನ್ ಲಾರಾ (220) ಹಾಗೂ ಇಂಗ್ಲೆಂಡ್‌ನ ಜೋ ರೂಟ್ (222) ನಂತರದ ಸ್ಥಾನದಲ್ಲಿದ್ದಾರೆ.

ಬಾಬರ್ ಆಜಂ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್‌ಗಳ ಸಾಧನೆ ಮಾಡಿದ ಪಾಕಿಸ್ತಾನದ 11ನೇ ಬ್ಯಾಟರ್ ಎನಿಸಿದ್ದಾರೆ.

ಶ್ರೀಲಂಕಾ ವಿರುದ್ಧಗಾಲೆ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಬಾಬರ್, ಟೆಸ್ಟ್ ಕ್ರಿಕೆಟ್‌ನಲ್ಲಿ ಏಳನೇ ಶತಕ ಸಾಧನೆ ಮಾಡಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 51.08ರ ಸರಾಸರಿಯಲ್ಲಿ 10 ಸಾವಿರ ರನ್ ಕ್ರಮಿಸಿರುವ ಬಾಬರ್, ಇದುವರೆಗೆ 25 ಶತಕ ಹಾಗೂ 66 ಅರ್ಧಶತಕಗಳನ್ನು ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT