ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಆಟಗಾರ ಸುರೇಶ್ ರೈನಾ ಅವರ ಪತ್ನಿ ಪ್ರಿಯಾಂಕ ಚೌಧರಿ, ಸೋಮವಾರ ಮುಂಜಾನೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಈ ಸಂತಸವನ್ನು ರೈನಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಪತ್ನಿ ಹಾಗೂ ಮಗನೊಂದಿಗಿರುವ ಚಿತ್ರವನ್ನು ಇನ್‌ಸ್ಟಾಗ್ರಾಮ್ ಹಾಗೂ ಟ್ವಿಟರ್‌ನಲ್ಲಿ ಹಾಕಿದ್ದಾರೆ.

ಹಿರಿಯ ಕ್ರಿಕೆಟಿಗರಾದ ಹರಭಜನ್ ಸಿಂಗ್ ಹಾಗೂ ಇರ್ಫಾನ್ ಪಠಾಣ್, ವೇಗದ ಬೌಲರ್ ಇಶಾಂತ್ ಶರ್ಮಾ, ಶಿಖರ್ ಧವನ್, ರಿಷಭ್ ಪಂತ್, ಕುಲದೀಪ್ ಯಾದವ್, ವೃದ್ಧಿಮಾನ್ ಸಹಾ, ಅಂಕಿತ್ ರಜಪೂತ್, ಬಹುಭಾಷ ನಟಿ ಶ್ರುತಿ ಹಾಸನ್, ನಟ ದುಲ್ಕರ್ ಸಲ್ಮಾನ್ ಸೇರಿದಂತೆ ಅನೇಕರು ರೈನಾ ದಂಪತಿಗೆ ಶುಭ ಹಾರೈಸಿದ್ದಾರೆ.

ರೈನಾ ಮತ್ತು ಪ್ರಿಯಾಂಕ 2015ರಲ್ಲಿ ವಿವಾಹವಾಗಿದ್ದರು. ಅವರಿಗೆ ಗ್ರೇಸಿಯಾ ಎಂಬ ಹೆಸರಿನ ಹೆಣ್ಣು ಮಗಳಿದ್ದಾಳೆ. ಗಂಡು ಮಗುವಿಗೆ ರೈನಾ ದಂಪತಿಯು ರಿಯೊ ಎಂದು ಹೆಸರಿಟ್ಟಿದೆ.

ಆಲ್‌ರೌಂಡರ್ ರೈನಾ ಅವರು 2018ರ ಜುಲೈ ಬಳಿಕ ಭಾರತ ತಂಡದಲ್ಲಿ ಆಡಿಲ್ಲ. ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುವ ಅವರು ಹೋದ ವರ್ಷ ಮೊಣಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದರಿಂದ ಚೇತರಿಸಿಕೊಂಡಿರುವ ಅವರು ಈ ತಿಂಗಳ ಆರಂಭದಲ್ಲಿ ಸಿಎಸ್‌ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹಾಗೂ ಸಹ ಆಟಗಾರರಾದ ಹರಭಜನ್ ಸಿಂಗ್ ಮತ್ತು ಪೀಯೂಷ್ ಚಾವ್ಲಾ ಅವರ ಜೊತೆ ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.