ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್‌ನಿಂದ ಹಿಂದೆ ಸರಿದ ಬೇಸ್ಟೊ, ಮಲಾನ್, ವೋಕ್ಸ್

Last Updated 11 ಸೆಪ್ಟೆಂಬರ್ 2021, 13:17 IST
ಅಕ್ಷರ ಗಾತ್ರ

ನವದೆಹಲಿ: ಸನ್‌ರೈಸರ್ಸ್‌ ಹೈದರಾಬಾದ್ ತಂಡದ ಆರಂಭಿಕ ಆಟಗಾರ ಜಾನಿ ಬೇಸ್ಟೊ, ಪಂಜಾಬ್ ಕಿಂಗ್ಸ್ ಬ್ಯಾಟ್ಸ್‌ಮನ್‌ ಡೇವಿಡ್‌ ಮಲಾನ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಲ್‌ರೌಂಡರ್‌ ಕ್ರಿಸ್ ವೋಕ್ಸ್ ಅವರು ಇಂಡಿಯನ್‌ ಪ್ರೀಮಿಯರ್ ಲೀಗ್ (ಐಪಿಎಲ್‌) ಕ್ರಿಕೆಟ್‌ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಹೋದ ಏಪ್ರಿಲ್‌–ಮೇ ನಲ್ಲಿ ಐಪಿಎಲ್ ಟೂರ್ನಿಯ ಮೊದಲ ಹಂತವು ಭಾರತದಲ್ಲಿಯೇ ಆಯೋಜನೆಗೊಂಡಿತ್ತು. ಆದರೆ ಬಯೋಬಬಲ್‌ ವ್ಯವಸ್ಥೆಯಲ್ಲಿಯೇ ಕೊರೊನಾ ಸೋಂಕು ಹರಡಿ, ಕೆಲವು ಆಟಗಾರರು ಸೋಂಕಿತರಾಗಿದ್ದರು. ಅದರಿಂದಾಗಿ ಟೂರ್ನಿಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಎರಡನೇ ಹಂತವು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ (ಯುಎಇ) ಇದೇ 19ರಿಂದ ನಡೆಯಲಿದೆ.

ಇಂಗ್ಲೆಂಡ್‌ನ ಈ ಮೂವರು ಆಟಗಾರರು ವೈಯಕ್ತಿಕ ಕಾರಣ ನೀಡಿ ಅವರು ಟೂರ್ನಿಯಲ್ಲಿ ಆಡುವುದಿಲ್ಲ ಎಂದಿದ್ದಾರೆ.

ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿದ್ದ ಇಂಗ್ಲೆಂಡ್ ಮತ್ತು ಭಾರತದ ಆಟಗಾರರು ಐಪಿಎಲ್‌ ಟೂರ್ನಿಗಾಗಿ ಮ್ಯಾಂಚೆಸ್ಟರ್‌ನಿಂದ ಒಟ್ಟಾಗಿ ಯುಎಇಗೆ ತೆರಳಬೇಕಿತ್ತು ಆದರೆ ಭಾರತ ತಂಡದ ಶಿಬಿರದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡ ಕಾರಣ, ಐಪಿಎಲ್ ತಂಡಗಳು ತಮ್ಮ ಆಟಗಾರರಿಗೆ ತಾವೇ ಪ್ರಯಾಣದ ಏರ್ಪಾಡುಗಳನ್ನು ಮಾಡಿಕೊಳ್ಳುವಂತೆ ಮಾಡಿವೆ.

ದುಬೈಗೆ ಆಗಮಿಸುವ ಎಲ್ಲಾ ಆಟಗಾರರು ಈಗ ಆರು ದಿನಗಳ ಕ್ವಾರಂಟೈನ್‌ಗೆ ಒಳಗಾಗಬೇಕು. ಬೇಸ್ಟೊ ಮತ್ತು ಮಲಾನ್ ಹಿಂದೆ ಸರಿಯಲು ಇದೂ ಕಾರಣವಾಗಿರಬಹುದು ಎನ್ನಲಾಗಿದೆ.

ಬೇಸ್ಟೊ ಮತ್ತು ಮಲಾನ್‌ ಐಪಿಎಲ್‌ನಲ್ಲಿ ಆಡುತ್ತಿಲ್ಲ ಎಂದುಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ. ವೋಕ್ಸ್ ಕೂಡ ಲಭ್ಯವಿಲ್ಲ ಎಂದು ‘ದ ಗಾರ್ಡಿಯನ್‘ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT