ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ಪಿಎಲ್: ಬೆಂಗಳೂರು ಸ್ಟ್ರೈಕರ್ಸ್‌ಗೆ ಮೊದಲ ಜಯ

Published 12 ಮಾರ್ಚ್ 2024, 0:11 IST
Last Updated 12 ಮಾರ್ಚ್ 2024, 0:11 IST
ಅಕ್ಷರ ಗಾತ್ರ

ಮುಂಬೈ: ಬೆಂಗಳೂರು ಸ್ಟ್ರೈಕರ್ಸ್ ತಂಡವು ಸೋಮವಾರ ನಡೆದ ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ ಟಿ10 ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಕೋಲ್ಕತ್ತ ಟೈಗರ್ಸ್ ತಂಡವನ್ನು ಸೂಪರ್ ಓವರ್‌ನಲ್ಲಿ ಮಣಿಸಿ, ಟೂರ್ನಿಯಲ್ಲಿ ಮೊದಲ ಜಯ ದಾಖಲಿಸಿತು.

ಇಲ್ಲಿನ ದಾದೋಜಿ ಕೊಂಡದೇವ್ ಕ್ರೀಡಾಂಗಣದಲ್ಲಿ ಸೂಪರ್‌ ಓಪರ್‌ನಲ್ಲಿ ಮೊದಲು ಬ್ಯಾಟ್‌ ಮಾಡಿದ ಬೆಂಗಳೂರು ತಂಡವು 21 ರನ್‌ ಗಳಿಸಿತು. ಥಾಮಸ್ ಡಯಾಸ್ 3 ಎಸೆತಗಳಲ್ಲಿ 13 ರನ್ ಗಳಿಸಿದರೆ, ಮನ್ಸೂರ್ ಕೆ.ಎಲ್. 8 ಸೇರಿಸಿದರು. ಇದಕ್ಕೆ ಉತ್ತರವಾಗಿ ಕೋಲ್ಕತ್ತ ತಂಡವು ಎರಡು ವಿಕೆಟ್‌ಗೆ 13 ರನ್‌ ಗಳಿಸಿ ಸೋತಿತು.

ಇದಕ್ಕೂ ಮೊದಲು ನಡೆದ ಪಂದ್ಯದಲ್ಲಿ ಕೋಲ್ಕತ್ತ ತಂಡವು 10 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 86 ರನ್‌ ಗಳಿಸಿತು. ಈ ಗುರಿಯನ್ನು ಬೆನ್ನತ್ತಿದ ಬೆಂಗಳೂರು ತಂಡವು ನಿಗದಿತ ಓವರ್‌ಗಳಲ್ಲಿ 7 ವಿಕೆಟ್‌ಗೆ 86 ರನ್‌ಗಳೊಂದಿಗೆ ಸಮಬಲ ಸಾಧಿಸಿತ್ತು.

ಈ ಗೆಲುವಿನೊಂದಿಗೆ ಸ್ಟ್ರೈಕರ್ಸ್‌ ತಂಡವು ನಾಕೌಟ್‌ ಹಂತಕ್ಕೆ ಪ್ರವೇಶಿಸುವ ಅವಕಾಶವನ್ನು ಇನ್ನೂ ಹೊಂದಿದೆ. ಕೋಲ್ಕತ್ತ ತಂಡವು ನಾಲ್ಕು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT