ಸೋಮವಾರ, ಫೆಬ್ರವರಿ 17, 2020
30 °C

ಬಾಂಗ್ಲಾ ಕ್ರಿಕೆಟ್ ತಂಡಕ್ಕೆ ವೆಸ್ಟ್‌ ಇಂಡೀಸ್‌ನ ಗಿಬ್ಸನ್‌ ಬೌಲಿಂಗ್‌ ಕೋಚ್‌

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಢಾಕಾ: ವೆಸ್ಟ್‌ ಇಂಡೀಸ್‌ನ ಹಿರಿಯ ಕ್ರಿಕೆಟಿಗ ಒಟ್ಟಿಸ್‌ ಗಿಬ್ಸನ್‌ ಅವರು ಬಾಂಗ್ಲಾದೇಶ ತಂಡದ ವೇಗದ ಬೌಲಿಂಗ್‌ ಕೋಚ್‌ ಆಗಿ ನೇಮಕವಾಗಿದ್ದಾರೆ.

ಮೊದಲು ಈ ಹುದ್ದೆಯಲ್ಲಿದ್ದ ದಕ್ಷಿಣ ಆಫ್ರಿಕಾದ ಚಾರ್ಲ್‌ ಲಾಂಗ್‌ವೆಲ್ಟ್‌ ಹೋದ ವರ್ಷದ ಡಿಸೆಂಬರ್‌ನಲ್ಲಿ ರಾಜೀನಾಮೆ ನೀಡಿದ್ದರು.

50 ವರ್ಷದ ಗಿಬ್ಸನ್‌ ಅವರೊಂದಿಗೆ ಎರಡು ವರ್ಷಗಳ ಕಾಲ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿ (ಬಿಸಿಬಿ) ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಗಿಬ್ಸನ್‌ ಅವರು ಈ ಹಿಂದೆ ವೆಸ್ಟ್‌ ಇಂಡೀಸ್‌ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಮುಖ್ಯ ಕೋಚ್‌ ಆಗಿ ಕೆಲಸ ಮಾಡಿದ್ದರು. ಇಂಗ್ಲೆಂಡ್‌ ತಂಡದ ಬೌಲಿಂಗ್‌ ಕೋಚ್‌ ಕೂಡ ಆಗಿದ್ದರು.

ಅವರು ಶುಕ್ರವಾರ ಬಾಂಗ್ಲಾ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು