ಶನಿವಾರ, ಏಪ್ರಿಲ್ 4, 2020
19 °C

ಬಾಂಗ್ಲಾದೇಶ ತಂಡದ ನಾಯಕತ್ವ ತೊರೆದ ಮೊರ್ತಜಾ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಸಿಲ್ಹೆಟ್‌: ಅನುಭವಿ ಆಟಗಾರ ಮಷ್ರಫೆ ಮೊರ್ತಜಾ ಅವರು ಬಾಂಗ್ಲಾದೇಶ ಏಕದಿನ ಕ್ರಿಕೆಟ್‌ ತಂಡದ ನಾಯಕತ್ವ ತೊರೆದಿದ್ದಾರೆ. ಗುರುವಾರ ಈ ನಿರ್ಧಾರ ಪ್ರಕಟಿಸಿದ್ದಾರೆ.

‘ಯುವ ಆಟಗಾರರಿಗೆ ಅವಕಾಶ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದೇನೆ. ಅವಕಾಶ ಸಿಕ್ಕರೆ ಆಟಗಾರನಾಗಿ ತಂಡದಲ್ಲಿ ಮುಂದುವರಿಯುತ್ತೇನೆ’ ಎಂದು 36 ವರ್ಷ ವಯಸ್ಸಿನ ಮೊರ್ತಜಾ ತಿಳಿಸಿದ್ದಾರೆ.

ಮೊರ್ತಜಾ ಅವರು ಏಕದಿನ ಮಾದರಿಯಲ್ಲಿ ಬಾಂಗ್ಲಾದೇಶದ ಯಶಸ್ವಿ ನಾಯಕ ಎನಿಸಿದ್ದಾರೆ. ಅವರ ಮುಂದಾಳತ್ವದಲ್ಲಿ 87 ಪಂದ್ಯಗಳನ್ನು ಆಡಿರುವ ತಂಡ 49ರಲ್ಲಿ ಗೆದ್ದಿದೆ.

2017ರಲ್ಲಿ ಟ್ವೆಂಟಿ–20 ಮಾದರಿಗೆ ವಿದಾಯ ಹೇಳಿದ್ದ ಮೊರ್ತಜಾ, ಗಾಯದ ಕಾರಣ 2009ರ ನಂತರ ಒಂದೂ ಟೆಸ್ಟ್‌ ಆಡಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು