ಸೋಮವಾರ, ಆಗಸ್ಟ್ 10, 2020
23 °C

ಬಿಹಾರ ಪ್ರವಾಹ ನಿಧಿಗಾಗಿ ರಾಹುಲ್ ಬ್ಯಾಟ್‌ ಹರಾಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕದ ಕೆ.ಎಲ್. ರಾಹುಲ್, ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮತ್ತಿತರ ಆಟಗಾರರು ಬಿಹಾರ ಮತ್ತು ಅಸ್ಸಾಂ ಪ್ರವಾಹ ಸಂತ್ರಸ್ತರ ನಿಧಿಗೆ ಸಹಾಯಹಸ್ತ ಚಾಚಿದ್ದಾರೆ.

ರಾಹುಲ್ ಅವರು ತಮ್ಮ ಬ್ಯಾಟ್‌ ಹರಾಜಿಗಿಟ್ಟಿದ್ದು, ಅದರಿಂದ ಬರುವ ಹಣವನ್ನು ಪರಿಹಾರ ನಿಧಿಗೆ ನೀಡಲಿದ್ದಾರೆ. ಕುಲದೀಪ್ ಯಾದವ್  ತಮ್ಮ ಹ್ಯಾಟ್ರಿಕ್ ಸಾಧನೆಯ ಚೆಂಡು, ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಸಿಂಗ್ ತಮ್ಮ ಕ್ರಿಕೆಟ್ ಪೋಷಾಕು, ಸಾನಿಯಾ ಅವರು ಟೆನಿಸ್ ರೆಕೆಟ್ ಮತ್ತು ವೃದ್ಧಿಮಾನ್ ಸಹಾ ಅವರು ಟೀಶರ್ಟ್ ಹರಾಜಿಗಿಟ್ಟಿದ್ದಾರೆ.  ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಸಂದೇಶ ನೀಡಿರುವ ಎಲ್ಲರೂ ಪರಿಹಾರ ನಿಧಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

ಆದರೆ ರಾಹುಲ್ ಅವರ ಈ ನಡೆಗೆ ಫೇಸ್‌ಬುಕ್‌ನಲ್ಲಿ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೋದ ವರ್ಷ ಕರ್ನಾಟಕದಲ್ಲಿ ಭೀಕರ ಪ್ರವಾಹ ಬಂದಾಗ ಎಲ್ಲಿ ಹೋಗಿದ್ದರು. ಆಗ ಏಕೆ ಈ ಕೆಲಸ ಮಾಡಲಿಲ್ಲ ಎಂದು ರಾಮಚಂದ್ರ ಮಹಾರುದ್ರಪ್ಪ ಅವರು ಹಾಕಿರುವ ಪೋಸ್ಟ್‌ಗೆ ಬಹಳಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು