ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ಐಪಿಎಲ್‌ಗೂ ಯುಎಇ ವೇದಿಕೆ?

ಟೂರ್ನಿಗಳ ಆತಿಥ್ಯಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ–ಎಮಿರೇಟ್ಸ್ ಕ್ರಿಕೆಟ್ ಮಂಡಳಿ ಒಪ್ಪಂದ
Last Updated 19 ಸೆಪ್ಟೆಂಬರ್ 2020, 14:53 IST
ಅಕ್ಷರ ಗಾತ್ರ

ದುಬೈ: ಟೂರ್ನಿಗಳ ಆಯೋಜನೆ ಮತ್ತು ಪರಸ್ಪರ ಸಹಕಾರಕ್ಕೆ ಸಂಬಂಧಿಸಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತು ಎಮಿರೇಟ್ಸ್‌ ಕ್ರಿಕೆಟ್ ಮಂಡಳಿ ಶನಿವಾರ ಒಪ್ಪಂದಕ್ಕೆ ಸಹಿ ಹಾಕಿದೆ. ಕೋವಿಡ್–19ರಿಂದಾಗಿ ಉಂಟಾಗಿರುವ ವಿಷಮ ಸ್ಥಿತಿಯಲ್ಲಿ ಭಾರತಕ್ಕೆ ಯುಎಇಯಲ್ಲಿ ಟೂರ್ನಿಗಳನ್ನು ಆಯೋಜಿಸಲು ಈ ಒಪ್ಪಂದ ನೆರವಾಗಲಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ‘ನಾನು ಮತ್ಉತ ಎಮಿರೇಟ್ಸ್‌ ಕ್ರಿಕೆಟ್ ಮಂಡಳಿಯ ಉಪಾಧ್ಯಕ್ಷ ಖಲೀದ್ ಅಲ್ ಜರೂನಿ ಒಪ್ಪಂದಕ್ಕೆ ಸಹಿ ಹಾಕಿದ್ದು ಇದರಿಂದ ಎರಡೂ ದೇಶಗಳ ನಡುವೆ ಕ್ರಿಕೆಟ್ ಸಂಬಂಧಗಳು ಗಟ್ಟಿಯಾಗಲಿವೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕೋಶಾಧ್ಯಕ್ಷ ಅರುಣ್‌ ಧುಮಾಲ್ ಇದ್ದರು.

ಟೂರ್ನಿಗಳ ಆಯೋಜನೆ ಬಗ್ಗೆ ನಿಖರವಾದ ಮಾಹಿತಿ ನೀಡಲಿಲ್ಲವಾದರೂ 2021ರಲ್ಲಿ ನಡೆಯಲಿರುವ ಐಪಿಎಲ್‌ 14ನೇ ಆವೃತ್ತಿಯನ್ನು ಕೂಡ ಯುಎಇಯಲ್ಲೇ ಆಯೋಜಿಸಲು ಅವಕಾಶ ಲಭಿಸಿದಂತಾಗಿದೆ. 14ನೇ ಆವೃತ್ತಿಯನ್ನು ಮುಂದಿನ ಆರು ತಿಂಗಳ ಒಳಗೆ ಆಯೋಜಿಸಲು ಬಿಸಿಸಿಐ ಯೋಜನೆ ಹಾಕಿಕೊಂಡಿದೆ. ಕೋವಿಡ್‌ನಿಂದ ಭಾರತದಲ್ಲಿ ಪರಿಸ್ಥಿತಿ ಸುಧಾರಿಸದೇ ಇದ್ದರೆ ಪಂದ್ಯಗಳನ್ನು ಯುಎಇಯಲ್ಲಿ ಆಯೋಜಿಸುವ ಸಾಧ್ಯತೆ ಇದೆ.

‘ಇಂಗ್ಲೆಂಡ್ ವಿರುದ್ಧದ ಸರಣಿಯನ್ನು ಭಾರತದಲ್ಲೇ ಆಯೋಜಿಸಲು ಆದ್ಯತೆ ನೀಡಲಾಗುವುದಾದರೂ ಪರಿಸ್ಥಿತಿ ವಿಷಮಕರವಾಗಿದ್ದರೆ ಯುಎಇಗೆ ಸ್ಥಳಾಂತರವಾಗಲಿದೆ. ಯುಎಇ ಅಂಗಣಗಳನ್ನು ಪರ್ಯಾಯವಾಗಿ ಬಿಸಿಸಿಐ ಇರಿಸಿಕೊಳ್ಳಲಿದೆ’ ಎಂದು ಪದಾಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT