ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌ | ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟಿಸಿದ ಬಿಸಿಸಿಐ

Last Updated 20 ಫೆಬ್ರುವರಿ 2022, 7:55 IST
ಅಕ್ಷರ ಗಾತ್ರ

ನವದೆಹಲಿ: ಶ್ರೀಲಂಕಾ ವಿರುದ್ಧದ ಮೂರು ಟಿ–20 ಹಾಗೂ ಎರಡು ಟೆಸ್ಟ್‌ ಪಂದ್ಯಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದೆ.

ಫೆ.24ರಂದು ಲಖನೌದಲ್ಲಿ ಮೊದಲ ಟಿ–20 ಪಂದ್ಯ ನಡೆಯಲಿದ್ದು, ಫೆ.26, 27ರಂದು ಧರ್ಮಶಾಲಾದಲ್ಲಿ ಎರಡು ಮತ್ತು ಮೂರನೇ ಪಂದ್ಯ ನಡೆಯಲಿದೆ.

ಮಾ.4ರಂದು ಮೊಹಾಲಿಯಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಮಾ.12ರಿಂದ ಬೆಂಗಳೂರಿನಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ.

ಟಿ–20 ಸರಣಿಗೆ ಪ್ರಕಟಗೊಂಡಿರುವ ತಂಡ: ರೋಹಿತ್ ಶರ್ಮಾ (ನಾಯಕ), ಜಸ್‌ಪ್ರೀತ್ ಬುಮ್ರಾ (ಉಪನಾಯಕ), ಋತುರಾಜ್ ಗಾಯಕವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ದೀಪಕ್ ಹೂಡಾ, ರವೀಂದ್ರ ಜಡೇಜಾ, ಯಜುವೇಂದ್ರ ಚಾಹಲ್, ಕೆ.ಬಿಶ್ವೇಂದ್ರ ಚಾಹಲ್, ಕೆ. ಯಾದವ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್‌ಪ್ರೀತ್ ಬುಮ್ರಾ (ಉಪನಾಯಕ), ಪ್ರಿಯಾಂಕ್‌ ಪಾಂಚಾಲ್‌, ಮಯಂಕ್ ಅಗರವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆ.ಎಸ್ ಭರತ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್ ಯಾದವ್, ಸೌರಭ್ ಕುಮಾರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಮೊಹಮ್ಮದ್ ಶಮಿ

ಪ್ರಸ್ತುತ್ತ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟಿ–20 ಸರಣಿಯ ಮೊದಲೆರಡು ಪಂದ್ಯಗಳನ್ನು ಭಾರತ ಗೆದ್ದುಕೊಂಡಿದೆ. ಇಂದು ಮೂರನೇ ಹಾಗೂ ಅಂತಿಮ ಟಿ–20 ಪಂದ್ಯ ನಡೆಯಲಿದೆ. ಈ ಪಂದ್ಯವೂ ಸೇರಿದಂತೆ ಶ್ರೀಲಂಕಾ ವಿರುದ್ಧದಟಿ–20 ಸರಣಿಯಿಂದ ಮಾಜಿ ನಾಯಕವಿರಾಟ್‌ ಕೊಹ್ಲಿ, ವಿಕೆಟ್ ಕೀಪರ್ರಿಷಭ್ ಪಂತ್, ವೇಗಿ ಶಾರ್ದೂಲ್ ಠಾಕೂರ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕನ್ನಡಿಗ ಕೆ.ಎಲ್. ರಾಹುಲ್ ಮತ್ತು ವಾಷಿಂಗ್ಟನ್ ಸುಂದರ್ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹಾಗಾಗಿ ಅವರು ಶ್ರೀಲಂಕಾ ವಿರುದ್ಧದ ಕ್ರಿಕೆಟ್ ಸರಣಿಗೆ ಲಭ್ಯರಿರುವುದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT