ಅಬುಧಾಬಿ: ಈ ಬಾರಿಯ ಐಪಿಎಲ್-2020 ಟೂರ್ನಿಯ ಪ್ಲೇ ಆಫ್ ಪಂದ್ಯಗಳ ದಿನಾಂಕವನ್ನು ಬಿಸಿಸಿಐ ಪ್ರಕಟಿಸಿದೆ.ಮೊದಲ ಕ್ವಾಲಿಫೈಯರ್ ಮತ್ತು ಫೈನಲ್ ಪಂದ್ಯಗಳು ದುಬೈನಲ್ಲಿ ನಡೆಯಲಿದ್ದು, ಎಲಿಮಿನೇಟ್ ಮತ್ತು ಕ್ವಾಲಿಫೈಯರ್–2 ಪಂದ್ಯಗಳು ಪಂದ್ಯಗಳು ಅಬುಧಾಬಿಯಲ್ಲಿ ನಡೆಯಲಿವೆ.

ಲೀಗ್ ಹಂತದ ಪಾಯಿಂಟ್ಸ್ ಪಟ್ಟಿಯಲ್ಲಿ ಮೊದಲೆರಡು ಸ್ಥಾನಪಡೆಯುವ ತಂಡಗಳು ಮೊದಲ ಕ್ವಾಲಿಫೈಯರ್ನಲ್ಲಿ ಸೆಣಸಾಟ ನಡೆಸಲಿವೆ. ಗೆದ್ದ ತಂಡ ನೇರವಾಗಿ ಫೈನಲ್ ಟಿಕೆಟ್ ಗಿಟ್ಟಿಸಿಕೊಳ್ಳಲಿದೆ. ಈ ಪಂದ್ಯವು ನವೆಂಬರ್ 5ರಂದು ನಡೆಯಲಿದೆ. 3 ಮತ್ತು 4ನೇ ಸ್ಥಾನಗಳಲ್ಲಿರುವ ತಂಡಗಳು ನವೆಂಬರ್ 6ರಂದು ಎಲಿಮಿನೇಟರ್ ಪಂದ್ಯದಲ್ಲಿ ಆಡಲಿವೆ.

ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲುವ ತಂಡ ಎಲಿಮಿನೇಟರ್ ಹಣಾಹಣಿಯಲ್ಲಿ ಗೆದ್ದ ತಂಡದ ವಿರುದ್ಧ ನವೆಂಬರ್ 8 ರಂದು ಆಡಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಮತ್ತು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಜಯಿಸಿದ್ದ ತಂಡದೊಂದಿಗೆ ಫೈನಲ್ನಲ್ಲಿ ಪ್ರಶಸ್ತಿಗಾಗಿ ಹೋರಾಡಲಿದೆ. ಈ ಎಲ್ಲ ಪಂದ್ಯಗಳು ಸಂಜೆ.6 ಗಂಟೆಗೆ ಆರಂಭವಾಗಲಿವೆ.

ಐಪಿಎಲ್–2020 ಟೂರ್ನಿಯು ಸೆಪ್ಟೆಂಬರ್ 19ರಿಂದ ಆರಂಭವಾಗಿದ್ದು, ಲೀಗ್ ಹಂತದ ಪಂದ್ಯಗಳು ನವೆಂಬರ್ 3ರ ವರೆಗೆ ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.