ಶನಿವಾರ, ಸೆಪ್ಟೆಂಬರ್ 25, 2021
23 °C

ಟೀಮ್‌ ಇಂಡಿಯಾಗೆ ಧೋನಿ ಮಾರ್ಗದರ್ಶಕ: ಹಿತಾಸಕ್ತಿ ಸಂಘರ್ಷ ದೂರು

ಪಿಟಿಐ Updated:

ಅಕ್ಷರ ಗಾತ್ರ : | |

AFP

ನವದೆಹಲಿ: ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಆಡಲಿರುವ ಭಾರತ ತಂಡಕ್ಕೆ ಮಹೇಂದ್ರ ಸಿಂಗ್‌ ಧೋನಿ ಅವರನ್ನು ಮಾರ್ಗದರ್ಶಕರಾಗಿ ನೇಮಕಗೊಳಿಸಿದ್ದನ್ನು ಪ್ರಶ್ನಿಸಿ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಅಪೆಕ್ಸ್‌ ಕೌನ್ಸಿಲ್‌ಗೆ ಹಿತಾಸಕ್ತಿ ಸಂಘರ್ಷ ದೂರು ದಾಖಲಾಗಿದೆ.

ಧೋನಿ ಅವರನ್ನು ಮಾರ್ಗದರ್ಶಕರನ್ನಾಗಿ ನೇಮಕ ಮಾಡಿದ ಬಿಸಿಸಿಐ ನಡೆಯು ಕ್ರಿಕೆಟ್‌ ವಲಯದಲ್ಲಿ ಅಚ್ಚರಿ ಮೂಡಿಸಿದೆ.

40 ವರ್ಷದ ಧೋನಿ ಹೋದ ವರ್ಷ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಅವರು ಸದ್ಯ ಐಪಿಎಲ್‌ ಟೂರ್ನಿಯ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕರಾಗಿದ್ದಾರೆ. 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ ಟೂರ್ನಿ ಮತ್ತು 2011ರಲ್ಲಿ ಏಕದಿನ ವಿಶ್ವಕಪ್‌ ವಿಜೇತ ಟೀಮ್‌ ಇಂಡಿಯಾವನ್ನು ಧೋನಿ ಮುನ್ನಡೆಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು