ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿನ್‌, ಲಕ್ಷ್ಮಣ್‌ ಜೊತೆ ಸಿಇಒ ಹಾಜರಿ

Last Updated 30 ಏಪ್ರಿಲ್ 2019, 17:29 IST
ಅಕ್ಷರ ಗಾತ್ರ

ನವದೆಹಲಿ: ಹಿತಾಸಕ್ತಿ ಸಂಘರ್ಷ ಆರೋಪದಲ್ಲಿ ಹಿರಿಯ ಕ್ರಿಕೆಟಿಗರಾದ ಸಚಿನ್‌ ತೆಂಡೂಲ್ಕರ್‌ ಹಾಗೂ ವಿವಿಎಸ್‌ ಲಕ್ಷ್ಮಣ್‌ ಅವರನ್ನು ಖುದ್ದು ಹಾಜರಾಗುವಂತೆಒಂಬುಡ್ಸ್‌ಮನ್ ಡಿ.ಕೆ. ಜೈನ್‌ ಸೂಚಿಸಿದರೆ, ಬಿಸಿಸಿಐ ಸಿಇಒ ರಾಹುಲ್‌ ಜೊಹ್ರಿ ಮತ್ತು ಕಾನೂನು ತಂಡವು ಹಾಜರಿರಲಿದೆ ಎಂದು ತಿಳಿಸಿದೆ.

ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿಯಲ್ಲಿ ಸಚಿನ್, ಲಕ್ಷ್ಮಣ್ ಮತ್ತು ಸೌರವ್ ಗಂಗೂಲಿ ಇದ್ದಾರೆ. ಆದರೂ ಇವರು ಐಪಿಎಲ್ ಟೂರ್ನಿಯ ಬೇರೆ ಬೇರೆ ತಂಡಗಳಿಗೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದು ಹಿತಾಸಕ್ತಿ ಸಂಘರ್ಷ ನಿಯಮದ ಉಲ್ಲಂಘನೆಯಾಗಿದ್ದು,ಈ ಕುರಿತು ವಿವರಣೆ ನೀಡುವಂತೆ ಸೂಚಿಸಿ ಒಂಬುಡ್ಸ್‌ಮನ್ ಡಿ.ಕೆ. ಜೈನ್ ಅವರು ನೋಟಿಸ್ ಜಾರಿ ಮಾಡಿದ್ದರು.

‘ಈ ಕುರಿತಂತೆ ಸಚಿನ್‌ ಮತ್ತು ಲಕ್ಷ್ಮಣ್‌ ಅವರು ಈಗಾಗಲೇ ಉತ್ತರ ನೀಡಿದ್ದಾರೆ. ಆದರೂ, ಖುದ್ದು ಹಾಜರಾಗು
ವಂತೆ ಇಬ್ಬರಿಗೆ ಸೂಚಿಸಿದರೆ ಕಾನೂನು ತಂಡ ಹಾಜರಿರಲಿದೆ. ಈ ವಿಚಾರದಲ್ಲಿ ಬಿಸಿಸಿಐನ ನೀತಿಯಲ್ಲಿ ಯಾವುದೇ ಬದಲಾವಣೆಯಿಲ್ಲ’ ಎಂದು ಬಿಸಿಸಿಐನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT