ಸೌರವ್ ಗಂಗೂಲಿಗೆ ಮತ್ತೆ ಎದೆನೋವು: ಆಸ್ಪತ್ರೆಗೆ ದಾಖಲು

ಕೋಲ್ಕತ್ತ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಅವರನ್ನು ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಂಗಳವಾರ ರಾತ್ರಿಯಿಂದಲೇ ಅವರು ಅಸ್ವಸ್ಥಗೊಂಡಿದ್ದರು. ಬಳಿಕ ಎದೆನೋವು ಕಾಣಿಸಿಕೊಂಡಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಹೃದಯಾಘಾತದ ಸೌಮ್ಯ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಾಗಿದ್ದ ಗಂಗೂಲಿ ಅವರು ಬಳಿಕ ಗುಣಮುಖರಾಗಿ ಬಿಡುಗಡೆಯಾಗಿದ್ದರು.
ಓದಿ: 'ಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ'; ಆಸ್ಪತ್ರೆಯಿಂದ ಬಿಡುಗಡೆಗೊಂಡ ಸೌರವ್ ಗಂಗೂಲಿ
#BREAKING @BCCI president @SGanguly99 being taken to a private hospital in Kolkata after he complained of chest pain today morning, says sources in his family. Recently he was hospitalised following a mild heart attack. @DeccanHerald
— Soumya Das (@Soumyareporting) January 27, 2021
ಓದಿ: ಈಗಲಾದರೂ ಪೂಜಾರ, ಪಂತ್, ಅಶ್ವಿನ್ ಮಹತ್ವವನ್ನು ಮನಗಾಣುವಿರಿ: ಸೌರವ್ ಗಂಗೂಲಿ
48 ವರ್ಷ ವಯಸ್ಸಿನ ಸೌರವ್ ಗಂಗೂಲಿ ಅವರಿಗೆ ಜನವರಿ 2 ಶನಿವಾರದಂದು ವ್ಯಾಯಾಮ ನಡೆಸುತ್ತಿದ್ದ ವೇಳೆ ಲಘು ಹೃದಯಾಘಾತ ಕಾಣಿಸಿಕೊಂಡಿತ್ತು. ಅವರ ಹೃದಯದ ರಕ್ತನಾಳಗಳಲ್ಲಿ ಅಡೆತಡೆ ಕಂಡುಬಂದ ಕಾರಣ ಆ್ಯಂಜಿಯೊಪ್ಲಾಸ್ಟಿ ನಡೆಸಿ, ಒಂದು ಕಡೆ ಸ್ಟಂಟ್ ಆಳವಡಿಸಲಾಗಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.