ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕದಿನ ವಿಶ್ವಕಪ್: ತೆರಿಗೆ ವಿನಾಯಿತಿ ಸಿಗದಿದ್ದರೆ ಬಿಸಿಸಿಐಗೆ ₹955 ಕೋಟಿ ನಷ್ಟ

Last Updated 14 ಅಕ್ಟೋಬರ್ 2022, 10:59 IST
ಅಕ್ಷರ ಗಾತ್ರ

ನವದೆಹಲಿ: 2023ರ ಏಕದಿನ ಕ್ರಿಕೆಟ್ ವಿಶ್ವಕಪ್‌ನ ಐಸಿಸಿಯ ಪ್ರಸಾರ ಆದಾಯದ ಮೇಲೆ ಶೇಕಡಾ 21.84 ತೆರಿಗೆ ಹೆಚ್ಚುವರಿ ಶುಲ್ಕವನ್ನು ವಿಧಿಸುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಅಂಟಿಕೊಂಡರೆ, ಬಿಸಿಸಿಐ ಸುಮಾರು ₹ 955 ಕೋಟಿ (116 ಮಿಲಿಯನ್ ಡಾಲರ್) ಕಳೆದುಕೊಳ್ಳಬಹುದು ಎಂದು ಮಂಡಳಿಯ ವರದಿ ತಿಳಿಸಿದೆ.

ಭಾರತದಲ್ಲಿ ಮುಂದಿನ ವರ್ಷದ ಅಕ್ಟೋಬರ್–ನವೆಂಬರ್ ತಿಂಗಳಲ್ಲಿ 50 ಓವರ್‌ಗಳ ಏಕದಿನ ವಿಶ್ವಕಪ್ ಪಂದ್ಯಾವಳಿ ನಡೆಯಲಿದೆ.

ಐಸಿಸಿ ನಿಯಮಾವಳಿಗಳ ಪ್ರಕಾರ, ವಿಶ್ವಕಪ್ ಆತಿಥ್ಯ ವಹಿಸುವ ದೇಶವು ಅಲ್ಲಿನ ಸರ್ಕಾರದಿಂದ ತೆರಿಗೆ ವಿನಾಯಿತಿ ಪಡೆಯಬೇಕು.

ಆದರೆ, ಭಾರತದ ತೆರಿಗೆ ನಿಯಮಗಳಲ್ಲಿ ಅಂತಹ ವಿನಾಯಿತಿಗಳಿಗೆ ಅವಕಾಶ ಇಲ್ಲದಿರುವುದರಿಂದ 2016ರ ಟಿ–20ವಿಶ್ವಕಪ್ ಆಯೋಜನೆ ಸಂದರ್ಭ ಬಿಸಿಸಿಐ ₹193(23.5 ಮಿಲಿಯನ್) ಕೋಟಿ ಕಳೆದುಕೊಂಡಿದೆ. ಈ ಸಂಬಂಧ ಬಿಸಿಸಿಐ ಈಗಲೂ ಐಸಿಸಿ ಟ್ರಿಬ್ಯೂನಲ್‌ನಲ್ಲಿ ಹೋರಾಡುತ್ತಿದೆ.

'ಭಾರತದಲ್ಲಿ 2023ರ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಐಸಿಸಿಯ ಪ್ರಮುಖ ಪಂದ್ಯಾವಳಿಗಳಲ್ಲೊಂದಾದ ಏಕದಿನ ಕ್ರಿಕೆಟ್ ವಿಶ್ವಕಪ್ ಆಯೋಜಿಸಲಾಗಿದೆ. ಐಸಿಸಿ ಪಂದ್ಯಾವಳಿಗೆ ತೆರಿಗೆ ವಿನಾಯಿತಿ ಪಡೆಯುವ ಬಾಧ್ಯತೆ ಬಿಸಿಸಿಐ ಮೇಲಿದೆ’ಎಂದು ಅಕ್ಟೋಬರ್ 18ರಂದು ಮುಂಬೈನಲ್ಲಿ ನಡೆಯಲಿರುವ ವಾರ್ಷಿಕ ಸಾಮಾನ್ಯ ಸಭೆ(ಎಜಿಎಂ) ಹಿನ್ನೆಲೆಯಲ್ಲಿ ರಾಜ್ಯ ಘಟಕಗಳಿಗೆ ಕಳುಹಿಸಿರುವ ವರದಿಯಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದೆ.

‘ಭಾರತದ ತೆರಿಗೆ ಅಧಿಕಾರಿಗಳಿಂದ 2023ರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಪ್ರಸಾರ ಆದಾಯದ ಮೇಲೆ ಶೇಕಡ 20 ತೆರಿಗೆ(ಹೆಚ್ಚುವರಿ ಶುಲ್ಕ ಹೊರತುಪಡಿಸಿ) ಕುರಿತಾದ ಆದೇಶ ಐಸಿಸಿಗೆ ತಲುಪಿದೆ.

ಇದರಿಂದಾಗಿ ಐಸಿಸಿಯಿಂದ ಬಿಸಿಸಿಐಗೆ ಬರಲಿರುವ ಆದಾಯದಲ್ಲಿ ಕಡಿತವಾಗಲಿದೆ ಎಂದು ರಾಜ್ಯ ಘಟಕಗಳ ಜೊತೆ ಬಿಸಿಸಿಐ ಹಂಚಿಕೊಂಡಿರುವ ದಾಖಲೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT