ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೀಮ್ ಇಂಡಿಯಾ ಕೋಚ್ ಸ್ಥಾನಕ್ಕೆ ಆಸಿಸ್ ಮಾಜಿ ಕ್ರಿಕೆಟಿಗರನ್ನು ಸಂಪರ್ಕಿಸಿಲ್ಲ: ಶಾ

Published 24 ಮೇ 2024, 6:16 IST
Last Updated 24 ಮೇ 2024, 6:16 IST
ಅಕ್ಷರ ಗಾತ್ರ

ಮುಂಬೈ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರನ್ನು ಸಂಪರ್ಕಿಸಲಾಗಿದೆ ಎಂಬ ವರದಿಗಳನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಳ್ಳಿ ಹಾಕಿದ್ದಾರೆ.

ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರ ಅವಧಿಯು ಟಿ–20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಬಳಿಕ ಅಂತ್ಯವಾಗಲಿದೆ. ಆ ಸ್ಥಾನಕ್ಕೆ ಬಿಸಿಸಿಐ ಹೊಸ ಕೋಚ್ ಹುಡುಕಾಟದಲ್ಲಿದ್ದು, ಅರ್ಜಿ ಆಹ್ವಾನಿಸಿದೆ.

ಮೂರನೇ ಅವಧಿಗೆ ಕೋಚ್ ಆಗಿ ಮುಂದುವರಿಯಲು ಆಸಕ್ತಿ ಇಲ್ಲವೆಂದು ರಾಹುಲ್ ದ್ರಾವಿಡ್ ಬಿಸಿಸಿಐಗೆ ತಿಳಿಸಿದ್ದು, ಈ ನಡುವೆ ಆಸ್ಟ್ರೇಲಿಯಾದ ಮಾಜಿ ಆಟಗಾರರಾದ ರಿಕಿ ಪಾಂಟಿಂಗ್, ಜಸ್ಟಿನ್ ಲ್ಯಾಂಗರ್ ಅವರನ್ನು ಸಂಪರ್ಕಿಸಲಾಗಿದೆ. ಅವರು ತಮಗೆ ಬಂದಿದ್ದ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿತ್ತು.

‘ಕೋಚ್ ಸ್ಥಾನಕ್ಕೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರನ್ನು ನಾನಾಗಲಿ, ಬಿಸಿಸಿಐ ಆಗಲಿ ಸಂಪರ್ಕಿಸಿಲ್ಲ. ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಸುದ್ದಿಗಳು ಸರಿಯಲ್ಲ’ಎಂದು ಜಯ್ ಶಾ ಹೇಳಿದ್ದಾರೆ.

ಪಾಂಟಿಂಗ್ ಮತ್ತು ಲ್ಯಾಂಗರ್ ಕ್ರಮವಾಗಿ ಐಪಿಎಲ್‌ನ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಖನೌ ಸೂಪರ್‌ಜೈಂಟ್ಸ್ ತಂಡಗಳ ಮುಖ್ಯ ಕೋಚ್ ಆಗಿದ್ದಾರೆ.

'ಭಾರತದ ರಾಷ್ಟ್ರೀಯ ತಂಡಕ್ಕೆ ಮುಖ್ಯ ಕೋಚ್ ಆಯ್ಕೆಯು ನಿಖರ ಪ್ರಕ್ರಿಯೆಯಾಗಿದ್ದು, ಭಾರತದ ಕ್ರಿಕೆಟ್ ಬಗ್ಗೆ ಉತ್ತಮ ಜ್ಞಾನ ಮತ್ತು ಉತ್ತಮ ಶ್ರೇಣಿಯಲ್ಲಿರುವವವರನ್ನು ಆಯ್ಕೆ ಮಾಡುತ್ತದೆ ಎಂದಿದ್ದಾರೆ.

ಟೀಮ್ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಬರುವವರು ಭಾರತದ ದೇಶೀಯ ಕ್ರಿಕೆಟ್ ಬಗ್ಗೆ ಉತ್ತಮ ಜ್ಞಾನ ಹೊಂದಿರುವುದು ಅತ್ಯಂತ ಪ್ರಮುಖ ಎನ್ನುವ ಮೂಲಕ ಭಾರತೀಯರಿಗೆ ಅವಕಾಶ ಕೊಡುವ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT