ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ವಾರ್ಷಿಕ ನಮನ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದೆ.

ಮುಂಬೈನಲ್ಲಿ ಶನಿವಾರ ನಡೆದ ಬಿಸಿಸಿಐ ವಾರ್ಷಿಕ ಕಾರ್ಯಕ್ರಮದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರಿಗೆ ಜೀವಮಾನ ಸಾಧನೆಗಾಗಿ ಕರ್ನಲ್ ಸಿ.ಕೆ. ನಾಯ್ಡು ಪ್ರಶಸ್ತಿಯನ್ನು ಐಸಿಸಿ ಅಧ್ಯಕ್ಷ ಜಯ್ ಶಾ ಪ್ರದಾನ ಮಾಡಿದರು. ಇದೇ ವೇಳೆ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಮತ್ತು ಮಹಿಳಾ ತಂಡದ ಬ್ಯಾಟರ್ ಸ್ಮೃತಿ ಮಂದಾನ ಅವರಿಗೆ ಶ್ರೇಷ್ಠ ಆಟಗಾರ ಮತ್ತು ಆಟಗಾರ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

31 ವರ್ಷ ವಯಸ್ಸಿನ ಬೂಮ್ರಾ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ನ (ಐಸಿಸಿ) ಸರ್ ಗ್ಯಾರ್ಫೀಲ್ಡ್ ಸೋಬರ್ಸ್ ವರ್ಷದ ಕ್ರಿಕೆಟಿಗ ಪ್ರಶಸ್ತಿಗೂ ಆಯ್ಕೆಯಾಗಿದ್ದಾರೆ. ಅವರಿಗೆ ಬಿಸಿಸಿಐ ಪಾಲಿ ಉಮ್ರಿಗರ್ ಪ್ರಶಸ್ತಿ ನೀಡಲಾಯಿತು.

ಅಂತರರಾಷ್ಟ್ರೀಯ ಕ್ರಿಕೆಟ್ಗೆ ಈಚೆಗೆ ನಿವೃತ್ತಿ ಘೋಷಿಸಿದ ಸ್ಪಿನ್ ತಾರೆ ಆರ್.ಅಶ್ವಿನ್ ಅವರನ್ನು ವಿಶೇಷ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸರ್ಫರಾಜ್ ಖಾನ್ ಮತ್ತು ಆಶಾ ಶೋಭನಾ ಕ್ರಮವಾಗಿ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಉತ್ತಮ ಅಂತರ ರಾಷ್ಟ್ರೀಯ ಪದಾರ್ಪಣೆ ಪ್ರಶಸ್ತಿಗಳನ್ನು ಪಡೆದಿದ್ದಾರೆ.

2025ರ ನಮನ್ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ ಹೀಗಿದೆ..
.ಸಚಿನ್ ತೆಂಡೂಲ್ಕರ್ಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.