ಮುಂಬೈ: ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಇತಿಹಾಸ ಬರೆದ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ಕ್ರಿಕೆಟ್ ತಂಡವನ್ನು ಭಾನುವಾರ ಇಲ್ಲಿ ನಡೆಯುವ ವಾರ್ಷಿಕ 'ನಮನ್ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ ಬಿಸಿಸಿಐ ಸನ್ಮಾನಿಸಲಿದೆ.

ಇತ್ತೀಚೆಗೆ, ಐಸಿಸಿ ಪ್ರಶಸ್ತಿಗಳನ್ನು ಗೆದ್ದ ಭಾರತದ ಪುರುಷ ಮತ್ತು ಮಹಿಳೆಯರ ಐದೂ ತಂಡಗಳನ್ನು ಸನ್ಮಾನಿಸಲಾಗುವುದು. ಇದು ನಮನ್ ಪ್ರಶಸ್ತಿ 2026ರ ಪ್ರಮುಖ ಅಂಶವಾಗಿದೆ. ಇದು ಐತಿಹಾಸಿಕ ಎಂದು ಭಾರತೀಯ ಕ್ರಿಕೆಟ್ ಮಂಡಳಿ ಹೇಳಿದೆ.

ಮಾರ್ಚ್ 8ರಂದು ಅಹಮದಾಬಾದ್ನಲ್ಲಿ ನಡೆದ ಫೈನಲ್ನಲ್ಲಿ ನ್ಯೂಜಿಲೆಂಡ್ ಅನ್ನು 96 ರನ್ಗಳಿಂದ ಮಣಿಸಿದ ಭಾರತ ತಂಡ 3 ಬಾರಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡವಾಯಿತು. ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡ ಮೊದಲ ಮತ್ತು ತವರು ನೆಲದಲ್ಲಿ ಈ ಸಾಧನೆ ಮಾಡಿದ ಮೊದಲ ತಂಡವಾಗಿತ್ತು.

ಈ ಸಮಾರಂಭದಲ್ಲಿ ಇತ್ತೀಚೆಗೆ ಐಸಿಸಿ ಟ್ರೋಫಿಗಳನ್ನು ಗೆದ್ದ ಭಾರತದ ಎಲ್ಲ ತಂಡಗಳನ್ನು ಸನ್ಮಾನಿಸಲಾಗುವುದು, ಇದರಲ್ಲಿ 2025ರ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ತಂಡ, 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಪುರುಷರ ತಂಡ, 2026ರ ಅಂಡರ್ -19 ಕ್ರಿಕೆಟ್ ವಿಶ್ವಕಪ್ ಮತ್ತು 2025ರ ಮಹಿಳಾ ಅಂಡರ್ -19 ಟಿ 20 ವಿಶ್ವಕಪ್ ಗೆದ್ದ ತಂಡಗಳು ಸೇರಿವೆ.

ಇದರ ಜೊತೆಗೆ, ಬಿಸಿಸಿಐ ಇತ್ತೀಚೆಗೆ ಘೋಷಿಸಿದ ಕೆಲವು ವೈಯಕ್ತಿಕ ಪ್ರಶಸ್ತಿಗಳನ್ನು ಸಹ ಪ್ರದಾನ ಮಾಡಲಾಗುತ್ತದೆ.

ಈ ಪೈಕಿ, ಭಾರತ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ತಂಡದ ನಾಯಕ ಶುಭಮನ್ ಗಿಲ್, 2024–25ರ ಅವಧಿಯ ಅತ್ಯುತ್ತಮ ಅಂತರರಾಷ್ಟ್ರೀಯ ಕ್ರಿಕೆಟರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಮಹಿಳಾ ವಿಭಾಗದಲ್ಲಿ ಸ್ಮೃತಿ ಮಂದಾನ ಅತ್ಯುತ್ತಮ ಅಂತರರಾಷ್ಟ್ರೀಯ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಮಾಜಿ ದಿಗ್ಗಜರಾದ ರೋಜರ್ ಬಿನ್ನಿ ಮತ್ತು ರಾಹುಲ್ ದ್ರಾವಿಡ್ ಅವರಿಗೆ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಭಾರತ ಮಹಿಳಾ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಅವರಿಗೆ ಮಹಿಳಾ ವಿಭಾಗದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.