ಮುಂಬೈ:ಕೋವಿಡ್–19 ಭೀತಿಯಿಂದಾಗಿ ಐಪಿಎಲ್ ಹಾಗೂ ಇತರೆ ದೇಶಿ ಕ್ರಿಕೆಟ್ ಟೂರ್ನಿಗಳನ್ನು ಈಗಾಗಲೇ ಮುಂದೂಡಿರುವ ಬಿಸಿಸಿಐ, ಮುಂಬೈನಲ್ಲಿರುವ ತನ್ನ ಕೇಂದ್ರ ಕಚೇರಿಯನ್ನು ತಾತ್ಕಾಲಿಕವಾಗಿ ಮುಚ್ಚಲು ನಿರ್ಧರಿಸಿದೆ.

ಮಂಗಳವಾರದಿಂದಲೇ ಬಿಸಿಸಿಐ ಕಚೇರಿಗೆ ಬೀಗ ಹಾಕಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಹೊಸ ಸೂಚನೆ ಬರುವವರೆಗೆ ಮನೆಯಿಂದಲೇ ಕೆಲಸ ಮಾಡುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ.

‘ಕೋವಿಡ್–19 ಕಾರಣದಿಂದಾಗಿ ಮುಂಬೈನ್ ವಾಂಖೆಡೆ ಮೈದಾನದಲ್ಲಿ ಇರುವ ಬಿಸಿಸಿಐ ಕಚೇರಿಯನ್ನು ತಾತ್ಕಾಲಿಕವಾಗಿ ಮುಚ್ಚಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ. ಎಲ್ಲರು ಮನೆಯಿಂದಲೇ ಕೆಲಸ ಮಾಡಲಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೇ ತಿಂಗಳು 29ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿಯನ್ನು ಮುಂದಿನ ತಿಂಗಳು 15ರವರೆಗೆ ಮುಂದೂಡಲಾಗಿದೆ. ಇರಾನಿ ಟ್ರೋಫಿ, ಮಹಿಳೆಯರ ಚಾಲೆಂಜರ್ಸ್ ಟ್ರೋಫಿ ಸೇರಿದಂತೆ ಹಲವುದೇಶಿ ಕ್ರಿಕೆಟ್ ಟೂರ್ನಿಗಳನ್ನು ಬಿಸಿಸಿಐ ಮುಂಡೂಡಿದೆ.

ಕಳೆದ ವರ್ಷ ಡಿಸೆಂಬರ್ನಲ್ಲಿ ಚೀನಾದ ವುಹಾನ್ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕು, ಇದುವರೆಗೂ 100ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದೆ. ಪ್ರಪಂಚದಾದ್ಯಂತ ಸುಮಾರು 1,20,000 ಸಾವಿರ ಜನರಿಗೆ ಸೋಂಕು ಇರುವುದು ದೃಢವಾಗಿದ್ದು, ಜಾಗತಿಕವಾಗಿ 5,700ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಕೋವಿಡ್–19ಗೆದೇಶದಲ್ಲಿಯೂ ಇಬ್ಬರು ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 114ಕ್ಕೆ ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.