ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ಕ್ರಿಕೆಟ್ ತಂಡದ ಯಶಸ್ಸಿಗೆ ಗಂಗೂಲಿ–ದ್ರಾವಿಡ್ ಜೊತೆಯಾಟ ಅಗತ್ಯ: ಲಕ್ಷ್ಮಣ್

Last Updated 27 ಜೂನ್ 2020, 5:17 IST
ಅಕ್ಷರ ಗಾತ್ರ

ನವದೆಹಲಿ:ಕ್ರಿಕೆಟ್‌ನ ಮೂರೂ ಮಾದರಿಯಲ್ಲಿ ಭಾರತ ತಂಡ ಯಶಸ್ಸು ಸಾಧಿಸಲು, ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್‌ ಗಂಗೂಲಿ ಮತ್ತು ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥ ರಾಹುಲ್‌ ದ್ರಾವಿಡ್‌ ಅವರ ಜೊತೆಯಾಟ ತುಂಬಾ ಮುಖ್ಯ ಎಂದು ಮಾಜಿ ಕ್ರಿಕೆಟಿಗ ವಿವಿಎಸ್‌ ಲಕ್ಷ್ಮಣ್‌ ಅಭಿಪ್ರಾಯಪಟ್ಟಿದ್ದಾರೆ.

ಬಿಸಿಸಿಐನ 39ನೇ ಅಧ್ಯಕ್ಷರಾಗಿ ಗಂಗೂಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನೇಮಕವಾಗಿದ್ದರು. ಅದಕ್ಕೂ ಮುನ್ನ ಜುಲೈನಲ್ಲಿ ದ್ರಾವಿಡ್‌ ಎನ್‌ಸಿಎ ಜವಾಬ್ದಾರಿ ವಹಿಸಿಕೊಂಡಿದ್ದರು.

ಕ್ರೀಡಾ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ‘ಬಿಸಿಸಿಐ ಅಧ್ಯಕ್ಷ ಗಂಗೂಲಿ ಮತ್ತು ಎನ್‌ಸಿಎ ಮುಖ್ಯಸ್ಥ ದ್ರಾವಿಡ್‌ ಜೊಡಿ ಶ್ರೇಷ್ಠವಾದದ್ದು.! ಭಾರತ ತಂಡ‌ ಕ್ರಿಕೆಟ್‌ನಪ್ರತಿಯೊಂದು ಮಾದರಿಯಲ್ಲೂ ಯಶಸ್ವಿಯಾಗಬೇಕಿದ್ದರೆ, ಈ ಜೊತೆಯಾಟ ತುಂಬಾ ಮುಖ್ಯ. ತಂಡದ ನಾಯಕ, ಬಿಸಿಸಿಐ ಅಧ್ಯಕ್ಷ, ಎನ್‌ಸಿಯ ಮುಖ್ಯಸ್ಥ ಎಲ್ಲರೂ ಮುಖ್ಯ ಎಂದು ನನಗನಿಸುತ್ತದೆ’ ಎಂದು ಹೇಳಿಕೊಂಡಿದ್ದಾರೆ.

ವಿಶೇಷವೆಂದರೆ ಈ ಇಬ್ಬರೂ ಒಂದೇ ಪಂದ್ಯದ ಮೂಲಕ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಆಡಲಿಳಿದಿದ್ದ ಗಂಗೂಲಿ, ಬರೋಬ್ಬರಿ 301 ಎಸೆತಗಳನ್ನು ಎದುರಿಸಿ131 ರನ್ ಕಲೆಹಾಕಿದ್ದರು. ಏಳನೇ ಕ್ರಮಾಂಕದಲ್ಲಿ ಬ್ಯಾಟ್‌ ಬೀಸಿದ್ದ ದ್ರಾವಿಡ್‌,267 ಎಸೆತಗಳಲ್ಲಿ 95 ರನ್‌ ಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT