ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ವರ್ಷ ಭಾರತದಲ್ಲೇ ಐಪಿಎಲ್: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

Last Updated 20 ನವೆಂಬರ್ 2021, 14:40 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ ವರ್ಷ ‘ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)’ ಟೂರ್ನಿಯನ್ನು ಭಾರತದಲ್ಲೇ ಆಯೋಜಿಸಲಾಗುವುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ.

15ನೇ ಆವೃತ್ತಿಯ ಐಪಿಎಲ್ ಭಾರತದಲ್ಲೇ ನಡೆಯಲಿದೆ. ಎರಡು ಹೊಸ ತಂಡಗಳ ಸೇರ್ಪಡೆಯೊಂದಿಗೆ ಟೂರ್ನಿಯು ಮತ್ತಷ್ಟು ರೋಚಕವಾಗಿರಲಿದೆ. ಮೆಗಾ ಹರಾಜು ನಡೆಯಲಿದ್ದು, ಹೊಸ ತಂಡಗಳು ಹೇಗಿರಲಿವೆ ಎಂಬ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಜಯ್ ಶಾ ತಿಳಿಸಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

2022ನೇ ಸಾಲಿನ ಐಪಿಎಲ್‌ಗೆ ಅಹಮದಾಬಾದ್‌ ಮತ್ತು ಲಖನೌ ಫ್ರಾಂಚೈಸಿಗಳು ಸೇರ್ಪಡೆಯಾಗಿವೆ. ಹರಾಜು ನೀತಿ ಹಾಗೂ ಆಟಗಾರರನ್ನು ಉಳಿಸಿಕೊಳ್ಳುವುದಕ್ಕೆ ಸಂಬಂಧಿಸಿದ ವಿವರಗಳನ್ನು ಕಳೆದ ತಿಂಗಳಷ್ಟೇ ಬಿಸಿಸಿಐ ಬಹಿರಂಗಪಡಿಸಿತ್ತು.

ಕೋವಿಡ್ ಸಾಂಕ್ರಾಮಿಕದ ಮಧ್ಯೆಯೇ 2021ನೇ ಋತುವಿನ ಐಪಿಎಲ್ ಟೂರ್ನಿ ಭಾರತದಲ್ಲಿ ಆರಂಭಗೊಂಡಿತ್ತು. ಆಟಗಾರರು ಬಯೋಬಬಲ್‌ನಲ್ಲಿ ಇದ್ದು, ಟೂರ್ನಿಯಲ್ಲಿ ಭಾಗವಹಿಸಿದ್ದರು. ಆದರೂ ಕೆಲವು ಆಟಗಾರರು ಕೋವಿಡ್‌ ಸೋಂಕಿಗೆ ಒಳಗಾಗಿದ್ದರಿಂದ ಅರ್ಧದಲ್ಲೇ ಟೂರ್ನಿಯನ್ನು ಸ್ಥಗಿತಗೊಳಿಸಲಾಗಿತ್ತು. ಬಳಿಕ ಉಳಿದ ಪಂದ್ಯಗಳನ್ನು ಯುಎಇಯಲ್ಲಿ ಆಯೋಜಿಸಲಾಗಿತ್ತು. ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡವು ಪ್ರಶಸ್ತಿ ಜಯಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT