ಅಂಡರ್-19 ಮಹಿಳಾ ಟ್ವೆಂಟಿ-20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ₹5 ಕೋಟಿ ಬಹುಮಾನ

ನವದೆಹಲಿ: 19 ವರ್ಷದೊಳಗಿನ ಮಹಿಳೆಯರ ಟ್ವೆಂಟಿ-20 ವಿಶ್ವಕಪ್ ಫೈನಲ್‌ನಲ್ಲಿ ಶಫಾಲಿ ವರ್ಮಾ ನಾಯಕತ್ವದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಇತಿಹಾಸ ರಚಿಸಿದೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ವಿಶ್ವಕಪ್ ಗೆದ್ದಿರುವ 19 ವರ್ಷದೊಳಗಿನ ಮಹಿಳೆಯರ ತಂಡ ಮತ್ತು ಸಹಾಯಕ ಸಿಬ್ಬಂದಿಗೆ ₹5 ಕೋಟಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
BCCI Secretary Jay Shah announces Rs 5 crore prize money for Women's U19 cricket team and support staff. pic.twitter.com/nYnZ4MUa7q
— ANI (@ANI) January 29, 2023
ಇದೇ ಮೊದಲ ಆಯೋಜನೆಗೊಂಡಿರುವ ಐಸಿಸಿ ಅಂಡರ್-19 ಮಹಿಳಾ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪ್ರಶಸ್ತಿ ಎತ್ತಿ ಹಿಡಿದಿದೆ.
ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 17.1 ಓವರ್‌ಗಳಲ್ಲಿ 68 ರನ್ ಗಳಿಸಿ ಆಲೌಟ್ ಆಯಿತು.
69 ರನ್‌ಗಳ ಸಾಧಾರಣ ಮೊತ್ತ ಬೆನ್ನತ್ತಿದ ಭಾರತ 14 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.
ಭಾರತದ ಪರ ಗೊಂಗಡಿ ತ್ರಿಷಾ 24, ಸೌಮ್ಯ ತಿವಾರಿ ಔಟಾಗದೆ 24 ರನ್ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.
19 ವರ್ಷದೊಳಗಿನ ಮಹಿಳೆಯರ ವಿಶ್ವಕಪ್ ಅನ್ನು ಇದೇ ಮೊದಲ ಸಲ ಆಯೋಜಿಸಲಾಗಿತ್ತು. ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಶಫಾಲಿ ಪಡೆ ಚಾರಿತ್ರಿಕ ಸಾಧನೆ ಮಾಡಿದೆ.
ದಕ್ಷಿಣ ಆಫ್ರಿಕಾದಲ್ಲಿ ನಡೆದ ಟೂರ್ನಿಯಲ್ಲಿ ಭಾರತ ಯುವಪಡೆಯ ನಾಯಕತ್ವದ 19 ವರ್ಷದ ಶಫಾಲಿ ಇತಿಹಾಸ ಬರೆದಿದ್ದಾರೆ.
ಭಾರತದ ಸೀನಿಯರ್ ಮಹಿಳಾ ತಂಡವು ಇದುವರೆಗೂ ಯಾವುದೇ ಮಾದರಿಯಲ್ಲಿಯೂ ವಿಶ್ವಕಪ್ ಜಯಿಸಿಲ್ಲ. ಹೋದ ವರ್ಷ ವಿಶ್ವಕಪ್ ಫೈನಲ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಆಡಿದ್ದ ಮಹಿಳಾ ತಂಡದಲ್ಲಿ ಶಫಾಲಿ ಕೂಡ ಆಡಿದ್ದರು.
ಓದಿ... ಭಾರತಕ್ಕೆ ಅಂಡರ್-19 ಮಹಿಳಾ ಟ್ವೆಂಟಿ-20 ವಿಶ್ವಕಪ್ ಕಿರೀಟ; ಐತಿಹಾಸಿಕ ಸಾಧನೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.