ಗುರುವಾರ , ಸೆಪ್ಟೆಂಬರ್ 23, 2021
26 °C

ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಘೋಷಿಸಿ ಟ್ರೋಲ್‌ಗೆ ಗುರಿಯಾದ ಜಯ್ ಶಾ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮುಂಬೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಮುಂಬರುವ ಐಸಿಸಿ ಟ್ವೆಂಟಿ-20 ವಿಶ್ವಕಪ್‌ಗಾಗಿ ಭಾರತ ಕ್ರಿಕೆಟ್ ತಂಡವನ್ನು ಘೋಷಿಸಿದ ವಿಡಿಯೊ ಟ್ರೋಲಿಗರಿಗೆ ಭರ್ಜರಿ ಆಹಾರವಾಗಿದೆ. ವಿಡಿಯೊದಲ್ಲಿ ಜಯ್‌ ಶಾ ಪ್ರತಿ ಆಂಗ್ಲ ಪದವನ್ನು ಬಿಡಿಸಿ, ಬಿಡಿಸಿ ಓದುತ್ತಿರುವುದನ್ನು ನೆಟ್ಟಿಗರು ಟ್ರೋಲ್‌ ಮಾಡಿದ್ದಾರೆ.

ಜಯ್ ಶಾ ಭಾರತ ತಂಡದ ಆಟಗಾರರನ್ನು ಘೋಷಿಸುವ ವಿಡಿಯೊವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬಿಡುಗಡೆಗೊಳಿಸಿತ್ತು. ಆದರೆ ಜಯ್ ಶಾ ಆಂಗ್ಲ ಭಾಷೆಯನ್ನು ಉಚ್ಛರಿಸುತ್ತಿರುವ ಶೈಲಿಯು ವ್ಯಾಪಕ ಟ್ರೋಲ್‌ಗೆ ಗುರಿಯಾಗಿದೆ.

ಇದನ್ನೂ ಓದಿ: 

 

 

 

ಪರದೆ ಮೇಲಿನ ವಾಕ್ಯಗಳನ್ನು ಬಿಡಿಸಿ ಓದಲು ಜಯ್ ಶಾ ಪ್ರಯತ್ನಿಸುತ್ತಿದ್ದಾರೆ ಎಂಬಂತೆ ಭಾಸವಾಗುತ್ತಿದೆ. ಈ ನಡುವೆ ಕಾಂಗ್ರೆಸ್ ಪಕ್ಷವು ಇದಕ್ಕೆ ರಾಜಕೀಯ ಬಣ್ಣ ಬಳಿದಿದೆ.

 

ಯಾವ ಯೋಗ್ಯತೆಯ ಆಧಾರದಲ್ಲಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರಿಗೆ ಬಿಸಿಸಿಐ ಕಾರ್ಯದರ್ಶಿ ಪದವಿ ನೀಡಲಾಗಿದೆ ಎಂದು ಪ್ರಶ್ನಿಸಿದೆ.

 

 

 

ಈ ಕುರಿತು ಕಾಂಗ್ರೆಸ್ ವಕ್ತಾರೆ ಡಾ. ರಾಗಿಣಿ ನಾಯಕ್, ವಿಶ್ವದ ಅತ್ಯಂತ ಶ್ರೀಮಂತ ಮತ್ತು ಶಕ್ತಿಶಾಲಿ ಕ್ರಿಕೆಟ್ ಮಂಡಳಿ ಬಿಸಿಸಿಐ ಕಾರ್ಯದರ್ಶಿಯಾಗಿ ಜಯ್ ಶಾ ನೇಮಕ ಮಾಡಿರುವುದನ್ನು ಪ್ರಶ್ನಿಸಿದ್ದಾರೆ.

 

ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಕೂಡಾ ಜಯ್ ಶಾ ಅವರ ಶೈಲಿಯನ್ನು ವ್ಯಂಗ್ಯವಾಡಿದ್ದಾರೆ. 'ಎಂತಹ ಮುಗ್ಧ ಹುಡುಗ! ಆತ ಬಿಸಿಸಿಐ ಬಾಸ್. ಅವರ ಹೆಸರು ಜಯ್ ಶಾ. ನಿಸ್ಸಂಶವಾಗಿಯೂ ಬಿಜೆಪಿಯಲ್ಲಿ ಯಾವುದೇ ಕುಟುಂಬ ರಾಜಕಾರಣವಿಲ್ಲ ಅಥವಾ ಬಿಸಿಸಿಐನಲ್ಲಿ ರಾಜಕೀಯ ಹಸ್ತಕ್ಷೇಪವಿಲ್ಲ' ಎಂದಿದ್ದಾರೆ.

 

 

 

 

 

 

 

 

 

 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು