ಕೊಲಂಬೊ: ಏಷ್ಯಾ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷರಾಗಿ ಜಯ್ ಶಾ ಅಧಿಕಾರಾವಧಿಯನ್ನು ಒಂದು ವರ್ಷ ವಿಸ್ತರಣೆ ಮಾಡಲಾಗಿದೆ.

ಶನಿವಾರ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಜಯ್ ಶಾ ಕಳೆದ ವರ್ಷ ಜನವರಿಯಲ್ಲಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಧ್ಯಕ್ಷ ನಜ್ಮುಲ್ ಹಸನ್ ಅವರಿಂದ ಎಸಿಸಿಯ ಅಧಿಕಾರವನ್ನುವಹಿಸಿಕೊಂಡಿದ್ದರು.

ಜಯ್ ಶಾ ಅವರ ಅಧಿಕಾರ ವಿಸ್ತರಣೆಯನ್ನು ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ಅಧ್ಯಕ್ಷ ಶಮ್ಮಿ ಸಿಲ್ವಾ ಸಭೆಯಲ್ಲಿ ಪ್ರಸ್ತಾಪಿಸಿದರು. ಬಳಿಕ ಈ ನಾಮನಿರ್ದೇಶನಕ್ಕೆ ಎಸಿಸಿಯ ಎಲ್ಲಾ ಸದಸ್ಯರು ಸರ್ವಾನುಮತದಿಂದ ಬೆಂಬಲ ವ್ಯಕ್ತಪಡಿಸಿದ್ದಾರೆ.

‘ಎಸಿಸಿಯಲ್ಲಿನ ನನ್ನ ಗೌರವಾನ್ವಿತ ಸಹೋದ್ಯೋಗಿಗಳಿಗೆ ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಮತ್ತು ನಾವು ಪ್ರಾರಂಭಿಸಿದ ಎಲ್ಲಾ ಕೆಲಸವನ್ನು ಮುಂದುವರಿಸಲು ನಾನು ಅರ್ಹನೆಂದು ಪರಿಗಣಿಸಿದ್ದಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನಾನು ಈ ಗೌರವವನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜತೆಗೆ, ಏಷ್ಯಾದಲ್ಲಿ ನಮ್ಮ ಪ್ರೀತಿಯ ಕ್ರೀಡೆಯಾದ ಕ್ರಿಕೆಟ್ ಅನ್ನು ಸಂಘಟಿಸಲು, ಅಭಿವೃದ್ಧಿಪಡಿಸಲು ನಾನು ಬದ್ಧನಾಗಿದ್ದೇನೆ’ ಎಂದು ಜಯ್ ಶಾ ತಿಳಿಸಿದ್ದಾರೆ.

ಓದಿ...ಎಂ.ಎಸ್. ಧೋನಿ ಜೊತೆಗಿನ ವೈಮನಸ್ಸು ವದಂತಿ ತಳ್ಳಿಹಾಕಿದ ಗಂಭೀರ್: ಹೇಳಿದ್ದೇನು?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.