ಸೋಮವಾರ, ಜನವರಿ 24, 2022
29 °C

ವಿಶ್ವಕಪ್‌‌ನಲ್ಲಿ ಭಾರತ ವಿರುದ್ಧ ಗೆಲುವು ಪಾಕ್ ತಂಡದ ಅತ್ಯುತ್ತಮ ಕ್ಷಣ: ಬಾಬರ್

ಪಿಟಿಐ Updated:

ಅಕ್ಷರ ಗಾತ್ರ : | |

ಕರಾಚಿ: ಎಲ್ಲ ಲೆಕ್ಕಾಚಾರಗಳನ್ನು ಬದಿಗೆ ಸರಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ದಾಖಲಿಸಿದ ಗೆಲುವು ಪಾಕಿಸ್ತಾನ ತಂಡದ ಪಾಲಿಗೆ 2021ನೇ ವರ್ಷದ 'ಅತ್ಯುತ್ತಮ ಕ್ಷಣ' ಎಂದು ನಾಯಕ ಬಾಬರ್ ಆಜಂ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ವಿಶ್ವಕಪ್‌ನಲ್ಲಿ (ಏಕದಿನ ಹಾಗೂ ಟ್ವೆಂಟಿ-20 ಸೇರಿದಂತೆ ) ಭಾರತ ವಿರುದ್ಧ ಪಾಕಿಸ್ತಾನ ತಂಡವು ಗೆಲುವು ದಾಖಲಿಸಿತ್ತು.

ಇದನ್ನೂ ಓದಿ: 

ಕೊರೊನಾ ಹಿನ್ನೆಲೆಯಲ್ಲಿ ಯುಎಇ ಹಾಗೂ ಒಮಾನ್‌ನಲ್ಲಿ ಬಿಸಿಸಿಐ ಆಯೋಜಿಸಿದ್ದ ಟ್ವೆಂಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿತ್ತು.

ಏತನ್ಮಧ್ಯೆ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಎದುರಾದ ಸೋಲು ಅತಿ ಹೆಚ್ಚು ನೋವನ್ನು ಉಂಟು ಮಾಡಿತ್ತು ಎಂದು ಹೇಳಿದ್ದಾರೆ.

'ವಿಶ್ವಕಪ್‌ನಲ್ಲಿ ಭಾರತವನ್ನು ಸೋಲಿಸಲು ಸಾಧ್ಯವಾಗಿರುವುದು ನಿಜಕ್ಕೂ ಮಹತ್ತರ ಸಾಧನೆಯಾಗಿದೆ. ಕಳೆದ ಹಲವಾರು ವರ್ಷಗಳಿಂದ ವಿಶ್ವಕಪ್‌ನಲ್ಲಿ ಭಾರತವನ್ನು ಸೋಲಿಸಲು ಸಾಧ್ಯವಾಗಿರಲಿಲ್ಲ. ಇದುವೇ 2021ರಲ್ಲಿ ಪಾಕಿಸ್ತಾನದ ತಂಡದ ಪಾಲಿಗೆ ಅತ್ಯುತ್ತಮ ಕ್ಷಣ' ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು