ವಿಶ್ವಕಪ್‌ ತಂಡದಲ್ಲಿ ಸ್ಥಾನ ಗಳಿಸಲು ಐಪಿಎಲ್‌ ವೇದಿಕೆ

ಮಂಗಳವಾರ, ಏಪ್ರಿಲ್ 23, 2019
27 °C

ವಿಶ್ವಕಪ್‌ ತಂಡದಲ್ಲಿ ಸ್ಥಾನ ಗಳಿಸಲು ಐಪಿಎಲ್‌ ವೇದಿಕೆ

Published:
Updated:
Prajavani

ಮುಂಬೈ: ‘ಮುಂಬ ರುವ ಏಕದಿನ ವಿಶ್ವಕಪ್‌ಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಗಳಿಸಲು ಐ‍ಪಿಎಲ್‌ ವೇದಿಕೆಯಾಗಿದೆ’ ಎಂದು ಆಸ್ಟ್ರೇಲಿಯಾ ತಂಡದ ವೇಗದ ಬೌಲರ್‌ ಜೇಸನ್‌ ಬೆಹ್ರೆನ್‌ಡೊರ್ಫ್‌ ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ಐ‍ಪಿಎಲ್‌ಗೆ ಪದಾರ್ಪಣೆ ಮಾಡಿದ್ದ ಜೇಸನ್‌, ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಿನ ಪಂದ್ಯದಲ್ಲಿ ಎರಡು ವಿಕೆಟ್‌ ಪಡೆದು ಮುಂಬೈ ಇಂಡಿಯನ್ಸ್‌ ಗೆಲುವಿನ ಹಾದಿ ಸುಗಮ ಮಾಡಿದ್ದರು.

‘ವಿಶ್ವಕಪ್‌ ತಂಡದಲ್ಲಿ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಹೇಳಲಾಗದು. ಐಪಿಎಲ್‌ನಲ್ಲಿ ಪರಿಣಾಮಕಾರಿ ಸಾಮರ್ಥ್ಯ ತೋರಿ ಆಯ್ಕೆ ಸಮಿತಿಯ ಗಮನ ಸೆಳೆಯಬೇಕು. ಅದರತ್ತ ಈಗ ಚಿತ್ತ ಹರಿಸಿದ್ದೇನೆ’ ಎಂದರು.

‘ಹೊಸ ಚೆಂಡಿನೊಂದಿಗೆ ದಾಳಿ ನಡೆಸಿ ಆರಂಭದಲ್ಲೇ ಎದುರಾಳಿಗಳ ವಿಕೆಟ್‌ ಉರುಳಿಸುವ ಸಾಮರ್ಥ್ಯ ನನಗಿದೆ. ಚೆನ್ನೈ ಎದುರು ಇದನ್ನು ಸಾಬೀತುಪಡಿಸಿದ್ದೇನೆ. ಟೂರ್ನಿಯ ಎಲ್ಲಾ ಪಂದ್ಯಗಳಲ್ಲೂ ಸ್ಥಿರ ಪ್ರದರ್ಶನ ನೀಡಿದರೆ ವಿಶ್ವಕಪ್‌ ತಂಡದಲ್ಲಿ ಸ್ಥಾನ ಗಳಿಸುವ ಹಾದಿ ಸುಗಮವಾಗಲಿದೆ’ ಎಂದು ಅವರು ನುಡಿದಿದ್ದಾರೆ.

ಜೇಸನ್‌ ಅವರು ಟ್ವೆಂಟಿ–20 ಮತ್ತು ಏಕದಿನ ಮಾದರಿ ಸೇರಿ ಒಟ್ಟು 13 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು 14 ವಿಕೆಟ್‌ ಉರುಳಿಸಿದ್ದಾರೆ. 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !