ಶುಕ್ರವಾರ, ಜನವರಿ 27, 2023
17 °C

ಪಾಕ್‌ ಎದುರು ಟೆಸ್ಟ್: ಇಂಗ್ಲೆಂಡ್ ಆಟಗಾರರು ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾವಲ್ಪಿಂಡಿ (ಎಪಿ): ನಾಯಕ ಬೆನ್ ಸ್ಟೋಕ್ಸ್ ಸೇರಿದಂತೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಐವರು ಆಟಗಾರರು ಅಸ್ವಸ್ಥರಾಗಿದ್ದಾರೆ. 

ಗುರುವಾರ ಇಲ್ಲಿ ಆರಂಭವಾಗಲಿರುವ ಪಾಕಿಸ್ತಾನ ಎದುರಿನ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಅವರು ಆಡುವ ಕುರಿತು ಇನ್ನೂ ಖಚಿತವಾಗಿಲ್ಲ. 

17 ವರ್ಷಗಳ ನಂತರ ಪಾಕಿಸ್ತಾನದಲ್ಲಿ ಕ್ರಿಕೆಟ್ ಸರಣಿ ಆಡಲು ಬಂದಿರುವ ಇಂಗ್ಲೆಂಡ್ ತಂಡದ ಹ್ಯಾರಿ ಬ್ರೂಕ್, ಜ್ಯಾಕ್ ಕ್ರಾಲಿ, ಕೀಟನ್ ಜೆನಿಂಗ್ಸ್, ಒಲಿ ಪೊಪ್ ಮತ್ತು ಜೋ ರೂಟ್ ಮಾತ್ರ ಬುಧವಾರ ಅಭ್ಯಾಸಕ್ಕೆ ಹಾಜರಾದರು.  ಉಳಿದ ಆಟಗಾರರು ಹೋಟೆಲ್‌ನ ತಮ್ಮ ಕೋಣೆಗಳಲ್ಲಿ ವಿಶ್ರಾಂತಿ ಪಡೆದರು. 

ತಂಡದ ವಕ್ತಾರರು ಆಟಗಾರರಿಗೆ ಆಗಿರುವ ಆರೋಗ್ಯ ಸಮಸ್ಯೆ ಕುರಿತು ವಿವರಗಳನ್ನು ನೀಡಿಲ್ಲ. ಆದರೆ, ‘ಆಟಗಾರರಿಗೆ ತಮ್ಮ ಕೋಣೆಗಳಲ್ಲಿಯೇ ವಿಶ್ರಾಂತಿ ಪಡೆಯಲು ತಿಳಿಸಿದ್ದಾರೆ’ ಎಂದಷ್ಟೇ ಹೇಳಿದ್ದಾರೆ.

ಗುರುವಾರದಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದ ನಡೆಯಲಿದೆ. ಆದರೆ ಬುಧವಾರ ನಾಯಕ ಸ್ಟೋಕ್ಸ್‌ ಅಭ್ಯಾಸಕ್ಕಾಗಿ ಕ್ರೀಡಾಂಗಣಕ್ಕೆ ಬರದ ಕಾರಣ ಟ್ರೋಫಿ ಅನಾವರಣ ಕಾರ್ಯಕ್ರಮವನ್ನೂ ಮುಂದೂಡಲಾಯಿತು. 

ಮೂರು ಪಂದ್ಯಗಳ ಸರಣಿಗೆ ಇಂಗ್ಲೆಂಡ್ ತಂಡವನ್ನು ಈಗಾಗಲೇ ಪ್ರಕಟಿಸಿದೆ. ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಜ್ಯಾಕ್ ಕ್ರಾಲಿ ಜೊತೆಗೆ ಬೆನ್ ಡಕೆಟ್ ಇನಿಂಗ್ಸ್ ಆರಂಭಿಸಲು ಸಿದ್ಧರಾಗಿದ್ದಾರೆ. ಪಂದ್ಯಗಳು ರಾವಲ್ಪಿಂಡಿ, ಮುಲ್ತಾನ್ ಮತ್ತು ಕರಾಚಿಯಲ್ಲಿ ನಡೆಯಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು