ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕದಿನ ವಿಶ್ವಕಪ್‌ಗೆ ಮರಳುವ ಸುಳಿವು ನೀಡಿದ ಬೆನ್ ಸ್ಟೋಕ್ಸ್

Last Updated 1 ಡಿಸೆಂಬರ್ 2022, 11:24 IST
ಅಕ್ಷರ ಗಾತ್ರ

ರಾವಲ್ಪಿಂಡಿ: ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಬೆನ್ ಸ್ಟೋಕ್ಸ್, ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಮರಳುವ ಸುಳಿವು ನೀಡಿದ್ದಾರೆ.

ಪಾಕಿಸ್ತಾನ ವಿರುದ್ಧ ಆರಂಭವಾಗಿರುವ ಮೊದಲ ಟೆಸ್ಟ್ ಪಂದ್ಯದ ವೇಳೆಯಲ್ಲಿ ಇಂಗ್ಲೆಂಡ್ ಆಲ್‌ರೌಂಡರ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

31 ವರ್ಷದ ಸ್ಟೋಕ್ಸ್, ಕೆಲಸದೊತ್ತಡವನ್ನು ಸರಿದೂಗಿಸುವ ನಿಟ್ಟಿನಲ್ಲಿ ಜುಲೈ ತಿಂಗಳಲ್ಲಿ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಆದರೆ ಸ್ಟೋಕ್ಸ್ ಪಾಲಿಗೆ ಇಂಗ್ಲೆಂಡ್ ತಂಡದ ಬಾಗಿಲು ಈಗಲೂ ತೆರೆದಿದೆ.

ವಿಶ್ವಕಪ್ ವೇಳೆ ನನ್ನ ಯೋಚನೆ ಹೇಗಿರಬಹುದೆಂದು ಯಾರಿಗೂ ಗೊತ್ತು ಎಂದು ಸ್ಟೋಕ್ಸ್ ಹೇಳಿಕೆಯನ್ನು 'ಇಎಸ್‌ಪಿಎನ್ ಕ್ರಿಕ್‌ಇನ್ಫೋ' ವೆಬ್‌ಸೈಟ್ ಉಲ್ಲೇಖಿಸಿದೆ.

ವಿಶ್ವಕಪ್‌ನಲ್ಲಿ ದೇಶವನ್ನು ಪ್ರತಿನಿಧಿಸುವುದು ಅದ್ಭುತ ಅನುಭವವಾಗಿದೆ. ಸದ್ಯ ಪಾಕಿಸ್ತಾನ ಸರಣಿ ಮೇಲೆ ಗಮನ ಹರಿಸಿದ್ದೇನೆ ಎಂದು ಸ್ಟೋಕ್ಸ್ ತಿಳಿಸಿದ್ದಾರೆ.

2019ರ ಏಕದಿನ ವಿಶ್ವಕಪ್ ಮತ್ತು ಇತ್ತೀಚೆಗಿನ ಟ್ವೆಂಟಿ-20 ವಿಶ್ವಕಪ್ ಗೆಲುವಿನಲ್ಲಿ ಸ್ಟೋಕ್ಸ್ ಮಹತ್ವದ ಪಾತ್ರ ವಹಿಸಿದ್ದರು.

ಮುಂದಿನ ವರ್ಷ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT